ಹೊಸದುರ್ಗ: ‘ಪಂದ್ಯದಲ್ಲಿ ಸೋತೆವೆಂದು ಯುವಕರು ಹತಾಶರಾಗಬಾರದು. ಆ ಸೋಲು ಮುಂದೆ ಗೆಲುವಿಗೆ ಪ್ರೇರಣೆಯಾಗಬೇಕು’ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು.

ಸಾಣೇಹಳ್ಳಿಯ ಬಸವೇಶ್ವರ ಬ್ರಾಂಡ್ ಬಾಯ್ಸ್ ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ 22 ವರ್ಷದೊಳಗಿನವರ ಹೊನಲು– ಬೆಳಕಿನ ವಾಲಿಬಾಲ್ ಟೂರ್ನಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

‘ಮರಳಿ ಯತ್ನವ ಮಾಡು ಎನ್ನುವಂತೆ ಕ್ರೀಡಾಪಟುಗಳು ನಿರಂತರ ಪ್ರಯತ್ನ ಪಟ್ಟರೆ ಮುಂದೆ ಯಶಸ್ಸು ಸಿಗಲಿದೆ. ಮುಂದಿನ ದಿನಗಳಲ್ಲಿ ಮಠ ಮತ್ತು ಬಸವೇಶ್ವರ ಯುವಕ ಸಂಘದ ಸಹಯೋಗದಲ್ಲಿ ಮತ್ತಷ್ಟು ಉತ್ತಮವಾಗಿ ಟೂರ್ನಿ ಆಯೋಜಿಸಲಾಗುವುದು. ವಿಜೇತರಿಗೆ ನೀಡಲಾಗುವ ಬಹುಮಾನದ ಮೊತ್ತ ಹೆಚ್ಚಿಸುವುದರಿಂದ ಇನ್ನೂ ಹೆಚ್ಚಿನ ತಂಡಗಳು ಭಾಗವಹಿಸಲು ಸಾಧ್ಯವಾಗುತ್ತದೆ’ ಎಂದರು.

ಟೂರ್ನಿಯಲ್ಲಿ ಒಟ್ಟು 25 ತಂಡಗಳು ಭಾಗವಹಿಸಿದ್ದವು. ಮಂಗಳೂರು ತಂಡ ಪ್ರಥಮ (₹ 15,000), ತರೀಕೆರೆ ತಾಲ್ಲೂಕಿನ ಬಾವಿಕೆರೆ ತಂಡ ದ್ವಿತೀಯ (₹10,000) ಹಾಗೂ ನವಣಕೆರೆ ತಂಡ ತೃತೀಯ (₹ 5000) ಬಹುಮಾನ ಪಡೆದುಕೊಂಡವು.

ಬಸವೇಶ್ವರ ಬ್ರಾಂಡ್ ಬಾಯ್ಸ್ ಸಂಘದ ಪದಾಧಿಕಾರಿಗಳು, ಸದಸ್ಯರು, ಕ್ರೀಡಾಪಟುಗಳು ಹಾಗೂ ಸಾಣೇಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-44-1215686430

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.