ಹೊಸದುರ್ಗ: ‘ತಾಲ್ಲೂಕಿನ ಎಲ್ಲಾ ಮತದಾರರು ಕಡ್ಡಾಯವಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಬಿಎಲ್ಒಗೆ ಪ್ರತಿಯೊಬ್ಬರೂ ಸಹಕರಿಸಬೇಕು’ ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಬೂತ್ ಏಜೆಂಟ್ ಹಾಗೂ ಕಾರ್ಯಕರ್ತರಿಗೆ ಸೂಚಿಸಿದರು.

ಕಾಂಗ್ರೆಸ್ ಪಕ್ಷದ ವತಿಯಿಂದ ಪಟ್ಟಣದ ಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಈಚೆಗೆ ಆಯೋಜಿಸಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.

‘ಪ್ರತಿಯೊಬ್ಬ ಬೂತ್ ಏಜೆಂಟ್ ತಮ್ಮ ಗ್ರಾಮಗಳಲ್ಲಿಯೇ ಇದ್ದು, ಯಾವ ಮತದಾರರ ಹೆಸರೂ ಬಿಟ್ಟು ಹೋಗದಂತೆ ಗಮನಹರಿಸಬೇಕು. ಮುಂದಿನ 2 ತಿಂಗಳು ಮತದಾರರು ತಮ್ಮ ಊರುಗಳಲ್ಲಿಯೇ ನೋಂದಣಿ ಮಾಡಿಸಬೇಕು’ ಎಂದು ತಿಳಿಸಿದರು.

‘ಪಶ್ಚಿಮ ಬಂಗಾಳದಲ್ಲಿ 1 ಲಕ್ಷಕ್ಕೂ ಅಧಿಕ ಮತದಾರರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ. ಅದು ನಮ್ಮಲ್ಲಿ ಆಗದಂತೆ ಎಚ್ಚರ ವಹಿಸಬೇಕಾಗಿದೆ. ಕರ್ನಾಟಕದಲ್ಲಿ 2028ರಲ್ಲಿ ಚುನಾವಣೆ ನಡೆಯಲಿದ್ದು, ಸಾಮೂಹಿಕ ಪ್ರಯತ್ನದಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಮಾಡಬೇಕಿದೆ’ ಎಂದರು.

ಸಫಾರಿ ಕರ್ಮಚಾರಿ ನಿಗಮದ ಅಧ್ಯಕ್ಷ ರಘು ಪಿ., ಗ್ಯಾರಂಟಿ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಣ್ಣ, ಆಗ್ನೇಯ ಪದವೀಧರ ಕ್ಷೇತ್ರದ ಆಕಾಂಕ್ಷಿ ಶಶಿ ಹುಲಿಕುಂಟೆಮಠ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪದ್ಮನಾಭ್ ಲೊಕೇಶಪ್ಪ, ನಗರ ಘಟಕದ ಅಧ್ಯಕ್ಷ ಆಗ್ರೋ ಶಿವಣ್ಣ, ಕೆಪಿಸಿಸಿ ಸದಸ್ಯರಾದ ಅಲ್ತಾಫ್ ಪಾಷ, ಎಂ.ಪಿ.ಶಂಕರ್, ನಾಗರಾಜ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಮಹಮದ್ ಇಸ್ಮಾಯಿಲ್, ಮುಖಂಡರಾದ ಗೋ.ತಿಪ್ಪೇಶ್, ಕಾರೇಹಳ್ಳಿ ಬಸವರಾಜ್, ಇಟ್ಟಿಗೇಹಳ್ಳಿ ರಾಜಣ್ಣ, ದೀಪಿಕಾ ಸತೀಶ್, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-44-1027767858

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.