ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿವಿಸಿ ಪೈಪ್‌ನಲ್ಲಿ ಸೀಸ: ಹಸ್ತಕ್ಷೇಪಕ್ಕೆ ‘ಸುಪ್ರೀಂ’ ನಕಾರ

Last Updated 25 ಮೇ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಪಾಲಿವಿನೈಲ್ ಕ್ಲೋರೈಡ್ (ಪಿವಿಸಿ) ಪೈಪ್‌ಗಳಲ್ಲಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಅಪಾಯಕಾರಿ ಸೀಸದ ಅಂಶ ಇರುವ ಎಚ್ಚರಿಕೆಯ ಸಂದೇಶ ಪ್ರಕಟಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಆದೇಶದ ಹಸ್ತಕ್ಷೇಪಕ್ಕೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಎನ್‌ಜಿಟಿ ಆದೇಶ ಪ್ರಶ್ನಿಸಿ ವಕೀಲ ಅಶ್ವಿನ್‌ ಕುಮಾರ್‌ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ  ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್ ಮತ್ತು ಇಂದೂ ಮಲ್ಹೋತ್ರ ಅವರಿದ್ದ ದ್ವಿಸದಸ್ಯ ಪೀಠ, ಎನ್‌ಜಿಟಿ ಮುಂದೆಯೇ ತಮ್ಮ ಸಂಕಟ ಹೇಳಿಕೊಳ್ಳುವಂತೆ ತಿಳಿಸಿದೆ.

ಪಿವಿಸಿ ಪೈಪ್‌ಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಬ್ಯುರೊ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್‌ (ಬಿಐಎಸ್‌) ಸಲಹೆ ಪಡೆದು ಕ್ರಮಕೈಗೊಳ್ಳಬೇಕು ಎಂದು ಕಳೆದ ವರ್ಷ ಮೇ 25ರಂದು ಹಸಿರು ನ್ಯಾಯಮಂಡಳಿಯು ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ನಿರ್ದೇಶನ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT