ಚಳ್ಳಕೆರೆ: ‘ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ತೀರಾ ಹಿಂದುಳಿದಿರುವ ತಾಲ್ಲೂಕಿನ ಗಡಿ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣದ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಕಾಲೇಜು ಶಿಕ್ಷಣ ಇಲಾಖೆ ಮತ್ತು ಶಾಸಕರ ವಿಶೇಷ ಅನುದಾನದಲ್ಲಿ ನಗರದ ಎಚ್ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಮೈಸೂರು ವಿಶ್ವವಿದ್ಯಾಲಯದ ಮಾದರಿಯಲ್ಲಿ ರೂಪಿಸಲಾಗುತ್ತಿದೆ’ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಕಾಲೇಜು ಆವರಣದಲ್ಲಿ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳನ್ನು ಗುರುವಾರ ಪರಿಶೀಲಿಸಿ ಮಾತನಾಡಿದರು.

‘₹2 ಕೋಟಿ ವೆಚ್ಚದಲ್ಲಿ ಹೈಟೆಕ್ ಗ್ರಂಥಾಲಯ ಕೊಠಡಿ ಕಾಮಗಾರಿ ಪ್ರಗತಿ ಹಂತದಲ್ಲಿದೆ. ಕಾಲೇಜು ಆವರಣದಲ್ಲಿ ಸದಾ ಚಿಮ್ಮುವ ಕಾರಂಜಿ ಜತೆಗೆ ಉದ್ಯಾನ ನಿರ್ಮಿಸಲಾಗುವುದು. ಎನ್ಎಸ್ಎಸ್, ಎನ್ಸಿಸಿ ಘಟಕ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ಬೇವು, ಹೊಂಗೆ, ಜಿವೆ ಮುಂತಾದ ತಳಿಯ ಸಾವಿರಾರು ಸಸಿಗಳನ್ನು ಬೆಳೆಸುವ ಮೂಲಕ ಹಸಿರೀಕರಣ ಮಾಡಲಾಗುವುದು.

ಗೇಟ್ನ ಎರಡೂ ಕಡೆಗೆ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಮತ್ತು ಆವರಣದಲ್ಲಿ ಡಬಲ್ ಡಾಂಬರ್ ರಸ್ತೆ, ಆಕರ್ಷಕ ಪ್ರವೇಶ ದ್ವಾರಬಾಗಿಲು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ಪ್ರಾಂಶುಪಾಲ ಪ್ರೊ.ಎಂ.ಕೆ.ದೇವಪ್ಪ, ಕಾಂಗ್ರೆಸ್ ಮುಖಂಡ ನಾರಾಯಣರೆಡ್ಡಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ನಾಗರಾಜ, ಇತಿಹಾಸ ಪ್ರಾಧ್ಯಾಪಕ ಕೆ.ಆರ್.ಜೆ.ರಾಜಕುಮಾರ್, ಇಂಗ್ಲಿಷ್ ಪ್ರಾಧ್ಯಾಪಕ ಪ್ರೊ.ಟಿ.ವಿಜಯಕುಮಾರ್, ಪ್ರೊ.ಬಸವರಾಜ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.