ಚಿತ್ರದುರ್ಗ: ‘ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಕಂಡುಬರಲು ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್ಪಿವಿ) ಕಾರಣ. ಇದನ್ನು ತಡೆಯಲು ನೀಡುವ ಎಚ್ಪಿವಿ ಲಸಿಕೆ ಸುರಕ್ಷಿತವಾಗಿದೆ’ ಎಂದು ಲಸಿಕಾಕರಣದ ರಾಜ್ಯ ಯೋಜನಾಧಿಕಾರಿ ಡಾ.ಮೆಲ್ವಿನ್ ಕುಮಾರ್ ತಿಳಿಸಿದರು.

ನಗರದ ನೆಹರೂ ನಗರ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಎಚ್ಪಿವಿ ಲಸಿಕಾ ಅಭಿಯಾನದಲ್ಲಿ ಮಾತನಾಡಿದರು.

‘ಭಾರತದಲ್ಲಿ ಕ್ಯಾನ್ಸರ್ ಪತ್ತೆಯಾದ ಮಹಿಳೆಯರ ಪೈಕಿ ಗರ್ಭಕಂಠದ ಕ್ಯಾನ್ಸರ್ಗೆ ತುತ್ತಾದವರ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿದೆ. ದೇಶಾದ್ಯಂತ ನಡೆಯುತ್ತಿರುವ ಅಭಿಯಾನದಲ್ಲಿ ಮುಖ್ಯವಾಗಿ 14 ವರ್ಷ ತುಂಬಿದ 15 ವರ್ಷದ ಒಳಗಿನ ಹೆಣ್ಣುಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ’ ಎಂದರು.

‘ಎಚ್ಪಿವಿ ಲಸಿಕೆ ಹೊಸದೇನಲ್ಲ. ಜಗತ್ತಿನಾದ್ಯಂತ ಈಗಾಗಲೇ 50 ಕೋಟಿ ಲಸಿಕೆಗಳನ್ನು ನೀಡಲಾಗಿದೆ. ಕಳೆದ 15 ವರ್ಷಗಳ ಅಂಕಿ ಅಂಶಗಳು ಲಸಿಕೆ ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ಸಾಬೀತುಪಡಿಸಿವೆ’ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಬಿ.ವಿ.ಗಿರೀಶ್ ತಿಳಿಸಿದರು.

ನೆಹರೂ ನಗರ ಆರೋಗ್ಯ ಕೇಂದ್ರದಲ್ಲಿ 8 ಬಾಲಕಿಯರಿಗೆ ಲಸಿಕೆ ನೀಡಲಾಯಿತು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಕೃಷ್ಣನಾಯಕ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಜಾನಕಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.