ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಗೆದ್ದರೆ ತಾನೆ ಮುಖ್ಯಮಂತ್ರಿ ಆಗೋದು: ಸಚಿವ ಜೆ.ಸಿ.ಮಾಧುಸ್ವಾಮಿ

Last Updated 28 ಜೂನ್ 2021, 9:29 IST
ಅಕ್ಷರ ಗಾತ್ರ

ಚಿತ್ರದುರ್ಗ: ಮುಂಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಅಲ್ವಾ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಆಗೋದು. ಮುಖ್ಯಮಂತ್ರಿ ಸ್ಥಾನ ಖಾಲಿ ಆಗಿ ಚುನಾವಣೆ ಮಾಡುವುದು ಬೇಡವೇ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಪ್ರಶ್ನಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ನಡೆದು ಶಾಸಕರು ಗೆದ್ದು ಬರಬೇಕು. ಆ ಬಳಿಕ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಚರ್ಚೆ ನಡೆಯುತ್ತದೆ. ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರದ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.

ಚುನಾವಣೆ ಬಳಿಕ ರಾಜಕಾರಣ ತಿರುವು ಪಡೆದುಕೊಳ್ಳುವ ಸಾಧ್ಯತೆ ಹೆಚ್ಚು. ಸಮ್ಮಿಶ್ರ ಸರ್ಕಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಯಾರೂ ಭಾವಿಸಿರಲಿಲ್ಲ. ಬಿಜೆಪಿಯಲ್ಲಿ ಯಾವುದೇ ಬಣಗಳು ಇಲ್ಲ. ಕಾಂಗ್ರೆಸ್‌ನವರು ಹುಟ್ಟು ಹಾಕುತ್ತಿರಬಹುದು' ಎಂದು ಹೇಳಿದರು.

'ಶಾಸಕ ರಮೇಶ್ ಜಾರಕಿಹೊಳಿ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ. ನಮ್ಮ ಪಕ್ಷದ ನಾಯಕರು ಮುಂಬೈನಲ್ಲಿ ಇದ್ದಾರೆ. ಆರೋಪದಿಂದ ಮುಕ್ತವಾದರೆ ಸಚಿವರಾಗುತ್ತಾರೆ. ಅವರನ್ನು ರಕ್ಷಣೆ ಮಾಡುವ ಪ್ರಶ್ನೆ ಇಲ್ಲ ಎಂದು ಹೇಳಿದರು.

ಕೋವಿಡ್ ಮೂರನೇ ಅಲೆ ಹೇಗೆ ವರ್ತಿಸುತ್ತದೆ ಎಂಬುದನ್ನು ನೋಡುತ್ತಿದ್ದೇವೆ. ಮಕ್ಕಳ ಮೇಲೆ ಹೆಚ್ಚು ಪರಿಣಾಮಕಾರಿ ಆಗುತ್ತೆ ಎಂಬುದನ್ನು ಕೇಳಿದ್ದೇವೆ. ಒಂದು ತಿಂಗಳು ನೋಡಿದ ಬಳಿಕ ಶಾಲೆ-ಕಾಲೇಜು ಆರಂಭದ ಬಗ್ಗೆ ತೀರ್ಮಾನ ಮಾಡುತ್ತೇವೆ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT