ಚಿತ್ರದುರ್ಗ: ನಗರದ ಖಾಸಗಿ ಸಿದ್ಧ ಉಡುಪು ಕಾರ್ಖಾನೆ (ಗಾರ್ಮೆಂಟ್ಸ್) ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರು ಬಾಂಗ್ಲಾದೇಶ ಪ್ರಜೆಗಳನ್ನು ಪತ್ತೆ ಹಚ್ಚಿದ್ದಾರೆ.

ಕೋಟೆ ಪೊಲೀಸ್ ಠಾಣೆ, ಗ್ರಾಮಾಂತರ ಠಾಣೆ ಪೊಲೀಸರು ವಿವಿಧ ಕಾರ್ಖಾನೆಗಳಲ್ಲಿ ಪರಿಶೀಲನೆ ನಡೆಸಿದಾಗ 15 ಮಂದಿ ಶಂಕಿತ ಬಾಂಗ್ಲಾದೇಶ ಪ್ರಜೆಗಳು ಪತ್ತೆಯಾಗಿದ್ದಾರೆ. ಅವರಲ್ಲಿ ಕೆಲವರು ಪಶ್ಚಿಮ ಬಂಗಾಳದ ಆಧಾರ್ ಕಾರ್ಡ್ ಹೊಂದಿದ್ದಾರೆ. ಅವರಲ್ಲಿ ಇಬ್ಬರು ಬಾಂಗ್ಲಾದೇಶದಿಂದ ಬಂದಿರುವುದು ಗೊತ್ತಾಗಿದೆ. ಉಳಿದವರ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ನೇತೃತ್ವದಲ್ಲಿ ಡಿವೈಎಸ್ಪಿ ದಿನಕರ್, ಸರ್ಕಲ್ ಇನ್ಸ್ಪೆಕ್ಟರ್ ಗುಡ್ಡಪ್ಪ ಹಾಗೂ ಸಿಬ್ಬಂದಿ ವಿಚಾರಣೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.