ಮಂಗಳವಾರ, ಡಿಸೆಂಬರ್ 7, 2021
27 °C

ಅಕ್ರಮ ಸಾಗಣೆ: 20 ಟನ್ ಪಡಿತರ ಅಕ್ಕಿ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಳಕು (ಚಳ್ಳಕೆರೆ): ತಾಲ್ಲೂಕಿನ ತಳಕು ಗ್ರಾಮದ ಬಳಿ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹ 6 ಲಕ್ಷ ಮೌಲ್ಯದ 20 ಟನ್ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಆಹಾರ ನಾಗರಿಕ ಸರಬರಾಜು ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡಿದ್ದಾರೆ. 

ಲಾರಿಯಲ್ಲಿ ಬಳ್ಳಾರಿಯಿಂದ ತುಮಕೂರು ಕಡೆಗೆ ಅಕ್ಕಿ ಸಾಗಿಸುತ್ತಿದ್ದ ಸಂಬಂಧ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಚಾಲಕನನ್ನು ಬಂಧಿಸಿದ್ದಾರೆ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ತಿಳಿಸಿದ್ದಾರೆ. ಆಹಾರ ನಿರೀಕ್ಷಕ ಶ್ರೀನಿವಾಸ್, ಕಂದಾಯ ಅಧಿಕಾರಿ ನಿಂಗೇಗೌಡ, ಪಿಎಸ್‍ಐ ತಿಮ್ಮಣ್ಣ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.