ಮಂಗಳವಾರ, ನವೆಂಬರ್ 19, 2019
23 °C

ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪಡಿತರ ಅಕ್ಕಿ ವಶ

Published:
Updated:

ಚಿತ್ರದುರ್ಗ: ಮೊಳಕಾಲ್ಮುರು ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ.

ಬಳ್ಳಾರಿಯಿಂದ ಬೆಂಗಳೂರಿಗೆ ಅಕ್ಕಿ ಸಾಗಣೆ ಮಾಡುತ್ತಿದ್ದ ಲಾರಿಯ ಮೇಲೆ ರಾಂಪುರ ಠಾಣೆಯ ಪೊಲೀಸರು ದಾಳಿ ನಡೆಸಿ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಲಾರಿಯಲ್ಲಿದ್ದ 14.5 ಟನ್ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ.

ಲಾರಿಯು ರಾಂಪುರದ ವೀರಭದ್ರೇಶ್ವರ ಟ್ರೇಡರ್ಸ್ ಮಾಲೀಕ ಚಂದ್ರಶೇಖರ್ ಎಂಬುವರಿಗೆ ಸೇರಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)