ಚಿತ್ರದುರ್ಗ: ಒಳ ಮೀಸಲಾತಿ ಜಾರಿಗೆ ರಾಜ್ಯದಲ್ಲಿ ನಡೆಯುತ್ತಿರುವ ಸಮೀಕ್ಷೆ ಕಾರ್ಯದಲ್ಲಿ 1.4 ಕೋಟಿ ಜನರು ಪಾಲ್ಗೊಂಡಿದ್ದಾರೆ. ಆಯೋಗ ವರದಿ ನೀಡುತ್ತಿದ್ದಂತೆ ಸಚಿವ ಸಂಪುಟದಲ್ಲಿ ಮಂಡಿಸಿ ಒಪ್ಪಿಗೆ ಪಡೆದು, ಜೂನ್ ಅಂತ್ಯದೊಳಗೆ ಒಳಮೀಸಲಾತಿ ಜಾರಿಗೊಳಿಸಬೇಕು’ ಎಂದು ಮಾಜಿ ಸಚಿವ ಎಚ್.ಆಂಜನೇಯ ಒತ್ತಾಯಿಸಿದರು.

‘ರಾಜ್ಯದಲ್ಲಿ ಕೈಗೊಂಡಿರುವ ಸರ್ವೇ ಕಾರ್ಯದ ಅವಧಿಯನ್ನು ಪುನಃ ವಿಸ್ತರಿಸಲಾಗಿದೆ. ಈ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಿದರು ಸಹ ಬಹಳಷ್ಟು ಜನ ಹೊರಗುಳಿದಿದ್ದಾರೆ. ಜೂ.8ರ ವರೆಗೆ ವಿಸ್ತರಿಸಿದ್ದು, ಈ ಅವಧಿಯೊಳಗೆ ಪ್ರತಿಯೊಬ್ಬರೂ ನೋಂದಣಿ ಮಾಡಿಕೊಳ್ಳಬೇಕು’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

‘ಮೇ 5ರಂದು ಆರಂಭಗೊಂಡ ಸಮೀಕ್ಷೆ ಆರಂಭದಲ್ಲಿ ಕುಂಟುತ್ತಾ, ಬಳಿಕ ವೇಗ ಪಡೆದುಕೊಂಡಿದೆ. ಆದರೆ, ಬೆಂಗಳೂರು ಪ್ರದೇಶದಲ್ಲಿ ಬಹಳಷ್ಟು ಮಂದಗತಿಯಲ್ಲಿ ಸಾಗುತ್ತಿದೆ. ಈ ಪ್ರದೇಶದಲ್ಲಿ ಹೆಚ್ಚು ಜಾಗೃತಿ ಜೊತೆಗೆ ಗಣತಿದಾರರು ಶ್ರಮವಹಿಸಿ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕಿದೆ’ ಎಂದರು.

‘ಒಳಮೀಸಲಾತಿ ಜಾರಿ ಬಳಿಕ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿಆಂಧ್ರ ಪದಗಳೇ ಇರುವುದಿಲ್ಲ. ಆಗ ಮೂಲ ಜಾತಿ ಆಧಾರದ ಮೇಲೆ ಮೀಸಲಾತಿ ದೊರೆಯಲಿದೆ. ಆದ್ದರಿಂದ ಜಾತಿಗಣತಿ ಸಮೀಕ್ಷೆ ಮಹತ್ವದ ಕಾಲಘಟ್ಟವಾಗಿದ್ದು, ಇದರಲ್ಲಿ ಪಾಲ್ಗೊಳ್ಳುವ ಮೂಲಕ ಮೀಸಲು ಹಕ್ಕು ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

‘ಬೆಂಗಳೂರಿನ ಬಹಳಷ್ಟು ಕೊಳಚೆ ಪ್ರದೇಶದಲ್ಲಿ ಕೂಲಿಗಾರರೇ ಹೆಚ್ಚಾಗಿದ್ದಾರೆ. ಗಣತಿದಾರರು ಮನೆ ಬಾಗಿಲಿಗೆ ಬರುವ ವೇಳೆಗೆ ಕೆಲಸಕ್ಕೆ ಹೋಗಿರುತ್ತಾರೆ, ಇನ್ನೂ ಪ್ರತಿಷ್ಠಿತ ಬಡಾವಣೆಗಳಲ್ಲಿ ಸಾಮಾಜಿಕ ಸಮಸ್ಯೆ ಕಾರಣಕ್ಕೆ ನೋಂದಣಿ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಬೇಕಿದೆ’ ಎಂದರು.

‘ಕೆಲ ಪಡಿತರ ಚೀಟಿಯಲ್ಲಿ ಪರಿಶಿಷ್ಟ ಜಾತಿ ಅವರನ್ನು ಪರಿಶಿಷ್ಟ ಪಂಗಡ ಎಂದು ನಮೂದಿಸಿರುವುದು ಕೂಡ ಸಮಸ್ಯೆ ಆಗಿದೆ. ಈ ಸಂಬಂಧ ಆಯೋಗಕ್ಕೆ ದೂರು ನೀಡಿದ್ದು, ತಕ್ಷಣ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ. ಜೊತೆಗೆ ಇಂತಹ ಪ್ರಕರಣಗಳ ಕುರಿತು ಸ್ಥಳೀಯವಾಗಿ ಸಮಾಜ ಕಲ್ಯಾಣ ಇಲಾಖೆಗೆ ದೂರು ನೀಡುತ್ತಿದ್ದಂತೆ ಅವರೇ ಸಮಸ್ಯೆ ಪರಿಹರಿಸಲಿದ್ದಾರೆ’ ಎಂದು ತಿಳಿಸಿದರು.

‘ಸರ್ಕಾರದ 36 ಇಲಾಖೆ ಹಾಗೂ ವಿಶ್ವವಿದ್ಯಾಲಯ ಸೇರಿ ಅನೇಕ ಅಂಗ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಜಾತಿವಾರು ಮಾಹಿತಿಯನ್ನು ನಾಗಮೋಹನ್ ದಾಸ್ ಆಯೋಗ, ಸರ್ಕಾರ ಕೇಳಿದ್ದರೂ ಈವರೆಗೂ ಮಾಹಿತಿ ನೀಡಿಲ್ಲ. ಈ ಸಂಬಂಧ ತಕ್ಷಣ ಅಂತಹ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ನೋಟಿಸ್ ಜಾರಿ ಮಾಡಬೇಕು. ಆಗ ಮಾತ್ರ ಸ್ಪಷ್ಟ ಮಾಹಿತಿ ದೊರೆಯಲಿದೆ’ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಉಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಿ.ಪಿ.ಪ್ರಕಾಶಮೂರ್ತಿ, ನರಸಿಂಹರಾಜು, ಲಿಡ್ಕರ್ ಮಾಜಿ ಅಧ್ಯಕ್ಷ ಓ.ಶಂಕರ್, ಮುಖಂಡರಾದ ದೇವರಾಜ್, ಹನುಮಂತಪ್ಪ, ರವೀಂದ್ರ, ಶರಣಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.