ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ | ಮೀಸಲಾತಿ ಹೆಚ್ಚಿಸಲು ಮೀನಮೇಷ ಎಣಿಸುತ್ತಿರುವ ಸರ್ಕಾರ: ರಘುಮೂರ್ತಿ

Last Updated 15 ಮೇ 2022, 4:14 IST
ಅಕ್ಷರ ಗಾತ್ರ

ಚಳ್ಳಕೆರೆ: ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದರೂ ಮೀಸಲಾತಿ ಹೆಚ್ಚಳ ಮಾಡುವಲ್ಲಿ ಸರ್ಕಾರ ಮೀನಮೇಷ ಎಣಿಸುತ್ತಿದೆ. ಹಾಗಾಗಿ ಎಸ್ಸಿ–ಎಸ್ಟಿ ಸಮುದಾಯಗಳು ಒಗ್ಗೂಡದ ಹೊರತು ಮೀಸಲಾತಿ ದೊರೆಯುವುದಿಲ್ಲ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.

ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ಎಸ್ಸಿ–ಎಸ್ಟಿ ಮೀಸಲಾತಿ ಹೆಚ್ಚಳ ಕುರಿತ ಪ್ರತಿಭಟನೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ದೇಶದ ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡಗಳು ಸ್ವಾಭಿಮಾನಿ ಜೀವನ ನಡೆಸುತ್ತಿವೆ ಎಂದು ಹೇಳಿದರು.

ನಗರಸಭೆ ಸದಸ್ಯ ಕೆ. ವೀರಭದ್ರಯ್ಯ, ‘ಮೇ 20ರಂದು ನಡೆಯುತ್ತಿರುವ ಮೀಸಲಾತಿ ಹೋರಾಟಕ್ಕೆ ಪ್ರತಿಯೊಬ್ಬರೂ ಭಾಗವಹಿಸುವ ಮೂಲಕ ಹಿಂದುಳಿದ ಸಮುದಾಯದ ಶಕ್ತಿಯನ್ನು ಸರ್ಕಾರಕ್ಕೆ ತೋರಿಸಬೇಕು’ ಎಂದು ಹೇಳಿದರು.

ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಮೇಶ್‍ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪ್ರಕಾಶ್ ಮೂರ್ತಿ, ತಿಪ್ಪೇಸ್ವಾಮಿ, ನಾಯಕ ಸಮುದಾಯದ ಯುವ ಮುಖಂಡ ಕೆ.ಟಿ. ಕುಮಾರಸ್ವಾಮಿ ಮಾತನಾಡಿದರು.

ಸೂರಯ್ಯ, ಕವಿತಾ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಮರ್ಥರಾಯ್, ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಸ್ವಪ್ನ ವೆಂಕಟೇಶ್, ಚೇತನಕುಮಾರ್, ಭೀಮನಕೆರೆ ಶಿವಮೂರ್ತಿ, ವೀರಭದ್ರಸ್ವಾಮಿ, ನಾಗರಾಜ, ತಿಪ್ಪೇಸ್ವಾಮಿ, ಸಿ.ಟಿ. ವೀರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT