ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಸ್ವಾತಂತ್ರ್ಯ ದಿನಾಚರಣೆ ನೇರಪ್ರಸಾರ

Last Updated 4 ಆಗಸ್ಟ್ 2020, 10:52 IST
ಅಕ್ಷರ ಗಾತ್ರ

ಚಿತ್ರದುರ್ಗ: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಫೇಸ್‌ಬುಕ್‌, ಟ್ವಿಟರ್‌ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ನೇರಪ್ರಸಾರ ಮಾಡಲು ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಮುರುಘರಾಜೇಂದ್ರ ಕ್ರೀಡಾಂಗಣದಿಂದ ಪೊಲೀಸ್‌ ಕವಾಯತು ಮೈದಾನಕ್ಕೆ ಸ್ಥಳಾಂತರಿಸಲಾಗಿದೆ. ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ಆಹ್ವಾನವಿಲ್ಲ. ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ಜಿಲ್ಲಾಡಳಿತವೇ ಭೇಟಿ ನೀಡಿ ಸನ್ಮಾನ ಮಾಡಲಿದೆ.

‘ವಿಜ್ಞಾನ ಕಾಲೇಜು ಆವರಣದ ಮುರುಘ ರಾಜೇಂದ್ರ ಕ್ರೀಡಾಂಗಣವನ್ನು ತರಕಾರಿ ಮಾರುಕಟ್ಟೆಯಾಗಿ ಪರಿವರ್ತಿಸಲಾಗಿದೆ. ಹೀಗಾಗಿ, ಪೊಲೀಸ್‌ ಕವಾಯತು ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್‌ ಹಾಗೂ ಮಾಸ್ಕ್‌ ಬಳಕೆ ಕಡ್ಡಾಯಗೊಳಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ತಿಳಿಸಿದರು.

‘ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಆ.15ರಂದು ಬೆಳಿಗ್ಗೆ 9ಕ್ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ’. ಆಶಾ ಕಾರ್ಯಕರ್ತೆಯರು ಕೋವಿಡ್‌ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶನ ಮಾಡುವರು. ಪೊಲೀಸ್‌ ಹಾಗೂ ಅಗ್ನಿಶಾಮಕ ದಳದ ಐದು ತಂಡಗಳು ಪರೇಡ್‌ ನಡೆಸಿಕೊಡಲಿವೆ. ಕೊರೊನಾ ಸೋಂಕಿನ ನಿವಾರಣೆಗೆ ಕೆಲಸ ಮಾಡುತ್ತಿರುವ ವಾರಿಯರ್ಸ್‌ಗಳನ್ನು ಸನ್ಮಾನಿಸಲಾಗುವುದು’ ಎಂದು ಮಾಹಿತಿ ನೀಡಿದರು.

ಪೊಲೀಸ್‌ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಯೋಗೇಶ್‌, ಹೆಚ್ಚುವರಿ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ಪ್ರಸನ್ನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT