ಚಿತ್ರದುರ್ಗ: ‘ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಸ್ಥಾಪನೆಯ 50ನೇ ವರ್ಷಾಚರಣೆಯ ಸುವರ್ಣ ಮಹೋತ್ಸವದಲ್ಲಿ ಪರಿಸರ ಸಂರಕ್ಷರಿಗೆ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥೆಯ ಸ್ಥಾಪನೆಗಾಗಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆಗಳನ್ನು ಗುರುತಿಸಿ ತಲಾ ಮೂರು ಪ್ರಶಸ್ತಿ ನೀಡಲಾಗುತ್ತದೆ. ಇದಕ್ಕಾಗಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗುತ್ತದೆ’ ಎಂದರು.

‘ನ.5 ರಂದು ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳ ಸಹಯೋಗದಲ್ಲಿ ನಗರದ ಮುರುಘ ರಾಜೇಂದ್ರ ಕ್ರೀಡಾಂಗಣದಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಇದೇ ವೇಳೆ 3 ಪರಿಸರ ಸ್ನೇಹಿ ಗ್ರಾಮ ಪಂಚಾಯಿತಿಗಳಿಗೂ ಪ್ರಶಸ್ತಿ ನೀಡಲಾಗುತ್ತದೆ. ಶಾಲಾ ವಿದ್ಯಾರ್ಥಿಗಳಿಗೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆ ಆಯೋಜಿಸಿ ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು’ ಎಂದು ವಿವರಿಸಿದರು.

ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಸೇರಿದಂತೆ ಶಿವಮೊಗ್ಗ ಹಾಗೂ ಚಿತ್ರದುರ್ಗ ಜಿಲ್ಲೆಯ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಧಿಕಾರಿಗಳು ಎಚ್ಚರಿಕೆಯಿಂದ ಶಿಷ್ಟಾಚಾರ ಪಾಲನೆ ಮಾಡಬೇಕು’ ಎಂದು ಸೂಚಿಸಿದರು.

‘ಕ್ರೀಡಾಂಗಣ ಸ್ವಚ್ಛಗೊಳಿಸಿ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ನಗರಸಭೆ ಸಹಯೋಗದೊಂದಿಗೆ ಮಾಡಬೇಕು. ಸೂಕ್ತ ಆಸನ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಪೊಲೀಸ್ ಬಂದೋಬಸ್ತ್, ಅಗ್ನಿ ಸುರಕ್ಷತೆ, ತುರ್ತುಚಿಕಿತ್ಸಾ ವಾಹನದ ವ್ಯವಸ್ಥೆ ಕಲ್ಪಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಅವರಿಗೆ ತಿಂಡಿ ಹಾಗೂ ಊಟದ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.

ಜಿಲ್ಲಾ ಪರಿಸರ ಅಧಿಕಾರಿ ಆಸಿಫ್ ಖಾನ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ, ಸಹಾಯಕ ಪರಿಸರ ಅಧಿಕಾರಿ ರಾಜೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.