ಚಿತ್ರದುರ್ಗ: 2023-24ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನಾಧಾರಿತ ಬೆಳೆವಿಮೆ ಯೋಜನೆಯಡಿ ಜಿಲ್ಲೆಯ 3,584 ರೈತರಿಗೆ ₹ 23.33 ಕೋಟಿ ವಿಮಾ ಮೊತ್ತವನ್ನು ಕ್ಷೇಮಾ ಇನ್ಸುರೆನ್ಸ್ ಕಂಪನಿ ವತಿಯಿಂದ ವಿಮಾದಾರರ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ತೋಟಗಾರಿಕೆ ಬೆಳೆಗಳಾದ ಅಡಿಕೆ, ಮಾವು ಮತ್ತು ದಾಳಿಂಬೆ ಬೆಳೆಗೆ ಜಿಲ್ಲೆಯ 3,648 ರೈತರು₹ 2.26 ಕೋಟಿ ಪ್ರೀಮಿಯಂ ಪಾವತಿಸಿ ನೋಂದಾಯಿಸಿಕೊಂಡಿದ್ದರು. ಈ ಪೈಕಿ 3584 ರೈತರಿಗೆ ₹ 23.33 ಕೋಟಿ ವಿಮಾ ಮೊತ್ತ ಬಿಡುಗಡೆ ಮಾಡಲಾಗಿದೆ. ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಸಹಕರಿಸಿದ ಜಿಲ್ಲೆಯ ಎಲ್ಲ ರೈತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಈ ಯೋಜನೆ ಅನುಷ್ಠಾನ ಮಾಡಲು ಸಹಕಾರ ನೀಡಬೇಕು ಎಂದು ಕೋರಿದ್ದಾರೆ.

ಮುಂದಿನ ವರ್ಷಗಳಲ್ಲಿ ಈ ಯೋಜನೆಯಡಿ ನೋಂದಾಯಿಸಿಕೊಳ್ಳುವ ರೈತರು ಯೋಜನೆಯ ಸದುಪಯೋಗ ಪಡೆಯಲು ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಕಡ್ಡಾಯವಾಗಿ ಬೆಳೆಯನ್ನು ಇಂಡೀಕರಿಸಬೇಕು. ಹಿಂದಿನ 2 ವರ್ಷಗಳಲ್ಲಿ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಕಡ್ಡಾಯವಾಗಿ ಬೆಳೆಯನ್ನು ನೋಂದಾಯಿಸಿಕೊಂಡಿರಬೇಕು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.