ಚಳ್ಳಕೆರೆ: ಬಿಜೆಪಿ ಸರ್ಕಾರ, ನಾಡಿನ ದಲಿತ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಿರುವ ಕಾರಣ ಕಾಂಗ್ರೆಸ್ ನಾಯಕರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ಬಿಜೆಪಿ ಮಂಡಲದ ತಾಲ್ಲೂಕು ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಹೇಳಿದರು.
‘ಚುನಾವಣೆಯಲ್ಲಿ ಕೇವಲ ಮತಕ್ಕಾಗಿ ಬಳಸಿಕೊಂಡು ದಲಿತ ಹಾಗೂ ಹಿಂದುಳಿದ ವರ್ಗಗಳನ್ನು ಮೂಲೆಗುಂಪು ಮಾಡಿರುವ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿಯನ್ನು ಟೀಕಿಸುವ ನೈತಿಕತೆ ಇಲ್ಲ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಜನಪರ ಯೋಜನೆ ತಂದಿರುವ ಕಾರಣ ಈ ಬಾರಿ ತಾಲ್ಲೂಕಿನಲ್ಲಿ ಬಿಜೆಪಿ ಗೆಲುವು ಖಚಿತ ಎಂದು ಬಿಜೆಪಿ ಮುಖಂಡ ಎಂ.ಶಿವಮೂರ್ತಿ ಹೇಳಿದರು.
ಎಸ್ಟಿ ಮೋರ್ಚಾ ಸದಸ್ಯ ಅನಿಲ್‍ಕುಮಾರ್, ಮುಖಂಡ ಎಂ.ಎನ್.ಜಯರಾಂ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಾಳೆಕಾಯಿ ರಾಮದಾಸ್, ತಾಲ್ಲೂಕು ಮಂಡಲದ ಮಾಜಿ ಅಧ್ಯಕ್ಷ ಸೋಮಶೇಖರ್ ಮಂಡಿಮಠ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.