ಚಿತ್ರದುರ್ಗ: ರಾಜ್ಯ ಸರ್ಕಾರ ಒಳಮೀಸಲಾತಿಯನ್ನು ಪರಿಪೂರ್ಣವಾಗಿ ಜಾರಿಗೊಳಿಸಬೇಕು, ಒಳಮೀಸಲಾತಿ ಅನ್ವಯಿಸಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಸಾಮಾಜಿಕ ಸಂಘರ್ಷ ಸಮಿತಿ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದರು.

ಒಳಮೀಸಲಾತಿಯನ್ನು ಕೈಬಿಟ್ಟು 56,432 ಹುದ್ದೆಗಳನ್ನು ಭಿರ್ತಿ ಮಾಡಲು ಕೈಗೊಂಡಿರುವ ನಿರ್ಣಯ ಅವೈಜ್ಞಾನಿಕವಾದುದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಾದಿಗ ಹಾಗೂ ಸಂಬಂಧಿತ ಜಾತಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಸುಪ್ರೀಂ ಕೋರ್ಟ್ ತೀರ್ಪಿನ ಮೇರೆಗೆ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸಬೇಕಾಗಿತ್ತು. ಆದರೆ ತೀರ್ಪು ಬಂದು ಒಂದು ವರ್ಷ ಕಳೆದರೂ ಒಳ ಮೀಸಲಾತಿ ಜಾರಿಯಾಗಿಲ್ಲ. ಒಳಮೀಸಲಾತಿ ಅನ್ವಯಿಸದೇ ಹುದ್ದೆಗಳನ್ನು ಭರ್ತಿ ಮಾಡಿದರೆ ಮಾದಿಗ ಸಮುದಾಯಕ್ಕೆ ಅನ್ಯಾಯ ಮಾಡಿದಂತಾಗುತ್ತದೆ. ಹೀಗಾಗಿ ಒಳ ಮೀಸಲಾತಿ ಅನುಸಾರ ಹುದ್ದೆಗಳನ್ನು ನೇಮಕಾತಿ ಮಾಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿ ವಿಷಯದಲ್ಲೂ ಒಳಮೀಸಲಾತಿ ಅನ್ವಯಿಸಬೇಕು. ವಿಶ್ವವಿದ್ಯಾಲಯವನ್ನು ಒಂದು ಘಟಕವನ್ನಾಗಿ ಮಾಡಿ ನೇಮಕಾತಿ ಮಾಡಲು ಹೊರಟಿರುವುದು ಖಂಡನೀಯ. ವಿಷಯಕ್ಕೆ ಅನುಸಾರವಾಗಿ ನೇಮಕಾತಿ ಪ್ರಕ್ರಿಯೆ ನಡೆಯಬೇಕು. ರಾಜ್ಯಸರ್ಕಾರ ಎಸ್ಸಿಪಿ– ಟಿಎಸ್ಪಿ ಹಣವನ್ನು ಬೇರೆ ಉದ್ದೇಶಗಳಿಗೆ ಬಳಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಧರಣಿಯಲ್ಲಿ ಮುಖಂಡರಾದ ಮಲ್ಲಿಕಾರ್ಜುನ್, ಸಿ.ಕೆ.ಮಹೇಶ್, ಕೆ.ಕುಮಾರ್, ಸಿ.ಎ.ಚಿಕ್ಕಣ್ಣ, ಡಿ.ದುರ್ಗೇಶ್, ರಾಮು, ಸುಧಾಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.