ಮಂಗಳವಾರ, ಜನವರಿ 26, 2021
20 °C
ಮುಖ್ಯಮಂತ್ರಿಗೆ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಒತ್ತಾಯ

ಶಿವಸಿಂಪಿ ಸಮುದಾಯಕ್ಕೆ ಒಬಿಸಿ ಪ್ರಮಾಣಪತ್ರ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ‘ಲಿಂಗಾಯತ ಶಿವಸಿಂಪಿ ಸಮುದಾಯವನ್ನು ಕೇಂದ್ರ ಸರ್ಕಾರ ಒಬಿಸಿ ಪಟ್ಟಿಯಲ್ಲಿ ಸೇರಿಸಿ ಎರಡು ದಶಕಗಳಾಗಿವೆ. ಇದನ್ನು ಪರಿಗಣಿಸಿ ಸಮುದಾಯಕ್ಕೆ ಪ್ರಮಾಣಪತ್ರ ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕ್ರಮ ಕೈಗೊಳ್ಳಬೇಕು’ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಒತ್ತಾಯಿಸಿದ್ದಾರೆ.

ಈ ಸಮುದಾಯಕ್ಕೆ ಮಹಾರಾಷ್ಟ್ರ ಸೇರಿ ಕೆಲ ರಾಜ್ಯಗಳಲ್ಲಿ ಈಗಾಗಲೇ ಒಬಿಸಿ ಪ್ರಮಾಣ ಪತ್ರ ನೀಡಲಾಗುತ್ತಿದೆ. ಇಲ್ಲಿಯೂ ಅದನ್ನು ಜಾರಿಗೆ ತಂದರೆ ಉನ್ನತ ವಿದ್ಯಾಭ್ಯಾಸ ಹಾಗೂ ಉದ್ಯೋಗ ಅವಕಾಶ ಪಡೆಯಲು ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

‘ರಾಜ್ಯದಲ್ಲಿ 2 ಲಕ್ಷ ಜನಸಂಖ್ಯೆ ಹೊಂದಿರುವ ಲಿಂಗಾಯತ ಶಿವಸಿಂಪಿ ಸಮುದಾಯದವರು ಕುಲಕಸುಬಾದ ಹೊಲಿಗೆ, ಬಟ್ಟೆ ವ್ಯಾಪಾರ, ಸಂತೆ ವ್ಯಾಪಾರ ಸೇರಿ ಇತರೆ ಸಣ್ಣಪುಟ್ಟ ಕೆಲಸ ಮಾಡುತ್ತಿದ್ದಾರೆ. ಜೀವನ ನಿರ್ವಹಣೆ ಕಷ್ಟವಾಗಿದೆ. ರಾಜಕೀಯ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದ್ದಾರೆ. ಇದನ್ನು ಪರಿಗಣಿಸಿ ಕೂಡಲೇ ಪ್ರಮಾಣಪತ್ರ ನೀಡಲು ಆದೇಶ ಹೊರಡಿಸಬೇಕು’ ಎಂದು ಅವರು ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು