ಬುಧವಾರ, ಏಪ್ರಿಲ್ 1, 2020
19 °C

ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ನಾಯಕನಹಟ್ಟಿಯ ತಿಪ್ಪೇರುದ್ರಸ್ವಾಮಿ ರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಗುರುವಾರ ಸಡಗರ, ಸಂಭ್ರಮದಿಂದ ನೆರವೇರಿತು. 

ಮಧ್ಯ ಕರ್ನಾಟಕದ ಅತಿ ದೊಡ್ಡ ಜಾತ್ರಾ ಮಹೋತ್ಸವ ಎಂಬ ಪ್ರತೀತಿಯನ್ನು ನಾಯಕನಹಟ್ಟಿ ಹೊಂದಿದೆ. ಒಂದು ವಾರ ಕಾಲ ಜಾತ್ರಾ ಮಹೋತ್ಸವ ಜರುಗಲಿದೆ.

ಮಹಾರಥೋತ್ಸವದ ಅಂಗವಾಗಿ ತಿಪ್ಪೇರುದ್ರಸ್ವಾಮಿ ದೇಗುಲದ ಒಳಮಠದಲ್ಲಿ ಬೆಳಿಗ್ಗೆಯಿಂದ ಪೂಜಾ ಕೈಂಕರ್ಯ ನಡೆದವು. ಜಾತ್ರೆಗೆ ಬಂದ ಭಕ್ತರು ದೇಗುಲದ ಮುಂಭಾಗದಲ್ಲಿ ಒಣ ಕೊಬ್ಬರಿ ಸುಟ್ಟು ಭಕ್ತಿ ಸಮರ್ಪಿಸಿದರು. ಕೊಬ್ಬರಿ ಸುಟ್ಟ ಹೊಗೆ ಮುಗಿಲೆತ್ತರಕ್ಕೆ ವಿಸ್ತರಿಸಿತ್ತು.

ಮಧ್ಯಾಹ್ನ 2.30ಕ್ಕೆ ಉತ್ಸವ ಮೂರ್ತಿಯನ್ನು ದೇಗುಲದಿಂದ ರಥದ ಬಳಿಗೆ ಕೊಂಡೊಯ್ಯಲಾಯಿತು. ರಥೋತ್ಸವಕ್ಕೊ ಮೊದಲು ಮುಕ್ತಿ ಬಾವುಟವನ್ನು ಹರಾಜು ಹಾಕಲಾಯಿತು. ವೀರಭದ್ರ ಬಾಬು ಅವರು ₹ 26 ಲಕ್ಷಕ್ಕೆ ಬಾವುಟ ಖರೀದಿಸಿದರು. 2019  ಮತ್ತು 2018 ರಲ್ಲಿ ₹ 72 ಲಕ್ಷಕ್ಕೆ ಖರೀದಿಸಲಾಗಿತ್ತು. ಹರಾಜು ಪ್ರಕ್ರಿಯೆ ಮುಗಿದ ಬಳಿಕ ಬಾವುಟವನ್ನು ರಥಕ್ಕೆ ಕಟ್ಟಿ ಚಾಲನೆ ನೀಡಲಾಯಿತು.

ರಥದ ಮುಕ್ತಿ ಬಾವುಟ ಪಡೆದರೆ ಆರೋಗ್ಯ, ಸಂಪತ್ತು ವೃದ್ಧಿಸುತ್ತದೆ ಎಂಬ ನಂಬಿಕೆ ಇದೆ. ಹೀಗಾಗಿ ಉದ್ಯಮಿಗಳು, ರಾಜಕಾರಣಿಗಳು ಬಾವುಟ ಪಡೆಯಲು ಪೈಪೋಟಿ ನಡೆಸುತ್ತಾರೆ.

ಜಾತ್ರಾ ಮಹೋತ್ಸವದ ಮೇಲೆ 'ಕೋವಿಡ್ - 19' ರ ಭೀತಿ ಆವರಿಸಿದೆ. ಮಾಸ್ಕ್ ಧರಿಸಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಲವು ಭಕ್ತರು ಮುಖಗವಸು ಧರಿಸಿ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಸಂಸದ ಎ. ನಾರಾಯಣಸ್ವಾಮಿ, ಶಾಸಕ ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು