ಕಡರನಾಯ್ಕನಹಳ್ಳಿ: ಸಮೀಪದ ಧೂಳೆಹೊಳೆ ಗ್ರಾಮದಲ್ಲಿ ಈಚೆಗೆ ಗುಂಡಿ ಬಸವೇಶ್ವರ ಸಣ್ಣ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ರಥೋತ್ಸವದ ಅಂಗವಾಗಿ ಬಸವೇಶ್ವರ ಉತ್ಸವ ಮೂರ್ತಿಯನ್ನು ರಥಾರೋಹಣ ಮಾಡಲಾಯಿತು. ಭಕ್ತರಿಂದ ರಥ ಪೂಜೆ, ಅಷ್ಟಬಲಿದಾನಗಳು ನಡೆದವು. ರಥದ ಗಾಲಿಗೆ ತೆಂಗಿನ ಕಾಯಿ ಒಡೆದು ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಭಕ್ತರು ರಥಕ್ಕೆ ಬಾಳೆಹಣ್ಣು, ದವಸ, ಧಾನ್ಯಗಳನ್ನು ಎರಚುವ ಮೂಲಕ ಭಕ್ತಿ ಸಮರ್ಪಿಸಿದರು.

ವಿವಿಧ ವಾದ್ಯ ಮೇಳಗಳು, ಭಜನಾ ತಂಡಗಳು ರಥೋತ್ಸವಕ್ಕೆ ಮೆರುಗು ತಂದವು. ಗ್ರಾಮದ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಬೆಳಿಗ್ಗೆಯಿಂದ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆದು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-43-356447482

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.