ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಟಿ ಮೀಸಲಾತಿಗೆ ಉರುಳು ಸೇವೆ

Last Updated 12 ಫೆಬ್ರುವರಿ 2021, 14:05 IST
ಅಕ್ಷರ ಗಾತ್ರ

ಚಿತ್ರದುರ್ಗ: ಕಾಡುಗೊಲ್ಲ ಸಮುದಾಯಕ್ಕೆ ಪರಿಶಿಷ್ಟ ಪಂಗಡದ (ಎಸ್‌ಟಿ) ಮೀಸಲಾತಿ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಫೆ.15ರಂದು ಉರುಳು ಸೇವೆ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಿ.ಶಿವು ಯಾದವ್ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 11ಕ್ಕೆ ಪ್ರವಾಸಿ ಮಂದಿರದ ಎದುರು ಸೇರುವ ಪ್ರತಿಭಟನಕಾರರು ಜಿಲ್ಲಾಧಿಕಾರಿ ಕಚೇರಿವರೆಗೆ ಉರುಳು ಸೇವೆ ಮಾಡಲಿದ್ದಾರೆ. ಈ ಹೋರಾಟದಲ್ಲಿ ಸಮುದಾಯದ ಜನಪ್ರತಿನಿಧಿಗಳು ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

‘ರಾಜ್ಯದಲ್ಲಿ ಈವರೆಗೆ ಅಧಿಕಾರಕ್ಕೆ ಬಂದಿರುವ ಎಲ್ಲ ಪಕ್ಷಗಳು ಕಾಡುಗೊಲ್ಲ ಜನಾಂಗವನ್ನು ಕಡೆಗಣಿಸಿವೆ. ಈ ಹಿಂದೆ ಸಮುದಾಯಕ್ಕೆ ಶೇ 3ರಷ್ಟು ಮೀಸಲಾತಿ ನೀಡಲಾಗಿತ್ತು. ನಂತರ ಪ್ರವರ್ಗ 1ಕ್ಕೆ ಸೇರಿಸಲಾಯಿತು. ಇದರಲ್ಲಿ ನೂರಕ್ಕೂ ಹೆಚ್ಚು ಜಾತಿಗಳಿವೆ. ಇದರಿಂದ ಸಮುದಾಯಕ್ಕೆ ವಂಚನೆಯಾಗಿದೆ’ ಎಂದು ಆರೋಪಿಸಿದ್ದಾರೆ.

‘2014ರಲ್ಲಿ ಕಾಡುಗೊಲ್ಲ ಜನಾಂಗದ ಕುಲಶಾಸ್ತ್ರೀಯ ಅಧ್ಯಯನ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ. ಕೇಂದ್ರ ಸರ್ಕಾರ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT