ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರು: ಸಂಭ್ರಮದಿಂದ ನೆರವೇರಿದ ಕಾಳು ಹಬ್ಬ

Last Updated 22 ಫೆಬ್ರುವರಿ 2023, 5:46 IST
ಅಕ್ಷರ ಗಾತ್ರ

ಹಿರಿಯೂರು: ತಾಲ್ಲೂಕಿನ ಮಸ್ಕಲ್ ಟಿಬಿ ಗೊಲ್ಲರಹಟ್ಟಿ ಗ್ರಾಮದ ತೋಪಿನಲ್ಲಿರುವ ಕಾಡುಗೊಲ್ಲರ ಆರಾಧ್ಯ ದೈವ ಅಮಾವಾಸ್ಯೆ ಚಿತ್ರಲಿಂಗೇಶ್ವರ ಸ್ವಾಮಿ, ಅಜ್ಜೇರು ಗೊಲ್ಲರ ಈರಲಿಂಗೇಶ್ವರ ಸ್ವಾಮಿ ಹಾಗೂ ಶ್ರೀ ಗೊಲ್ಲಾಳಮ್ಮ ದೇವಿಯ ಕಾಳುಹಬ್ಬ ಮಂಗಳವಾರ ನೂರಾರು ಭಕ್ತರ ನಡುವೆ ವಿಜೃಂಭಣೆಯಿಂದ ನೆರವೇರಿತು.

ಕಾಳು ಹಬ್ಬದ ಹಿನ್ನೆಲೆಯಲ್ಲಿ ದೇವರಿಗೆ ಫೆ. 19ರಿಂದ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು. ಸೋಮವಾರ ರಾತ್ರಿ ವಾರದ ಪೂಜೆ, ದೊಡ್ಡ ಪೂಜೆ, ಸ್ವಾಮಿಗೆ ನೈವೇದ್ಯ, ಮಹಿಳೆಯರಿಂದ ತಂಬಿಟ್ಟಿನ ಆರತಿ ಹಾಗೂ ಮೇಲ್ದೀಪ ಪೂಜೆ ಸಲ್ಲಿಸಲಾಯಿತು.

ಮಂಗಳವಾರ ಬೆಳಿಗ್ಗೆ ದೇವರನ್ನು ವಿವಿಧ ಹೂವುಗಳಿಂದ ಅಲಂಕರಿಸಿ, ದೇವರಿಗೆ ಬೇಯಿಸಿದ ಕಾಳಿನ ನೈವೇದ್ಯ ಅರ್ಪಿಸಿ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗಿಸಿದ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಕೊನೆಯಲ್ಲಿ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಡಿ.ಟಿ. ಶ್ರೀನಿವಾಸ್ ಪೂಜೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಮುಖಂಡರಾದ ಚಿದಾನಂದ್ ಮಸ್ಕಲ್, ಗ್ರಾಮ ಪಂಚಾಯಿತಿ ಸದಸ್ಯ ಎಂ. ಹರೀಶ್, ದಿನೇಶ್, ನಿಜಲಿಂಗಪ್ಪ, ಡಿ. ರಾಮಣ್ಣ, ನಿಂಗಪ್ಪ, ಡಿ. ನಿಜಲಿಂಗಪ್ಪ, ಹರೀಶ್, ಪಾಂಡು, ರಾಜಪ್ಪ, ಎನ್. ಬಂಗಾರಪ್ಪ, ಸಣ್ಣೀರಪ್ಪ ಅವರೂ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT