ಬುಧವಾರ, ಮಾರ್ಚ್ 29, 2023
29 °C

ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆ: ಕಣದಿಂದ ಮುರಾರ್ಜಿ ನಿವೃತ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಡಿ.ಓ.ಮುರಾರ್ಜಿ ಚುನಾವಣಾ ಕಣದಿಂದ ನಿವೃತ್ತಿ ಘೋಷಿಸಿದ್ದಾರೆ.

‘ಚಿಕ್ಕಪ್ಪನಹಳ್ಳಿ ಷಣ್ಮುಖ ಅವರನ್ನು ಬೆಂಬಲಿಸುವ ಉದ್ದೇಶದಿಂದ ಕಣದಿಂದ ನಿವೃತ್ತಿ ಘೋಷಣೆ ಮಾಡಿದ್ದೇನೆ. ಬೆಂಬಲಿಗರು ಹಾಗೂ ಹಿತೈಷಿಗಳೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಂಡಿದ್ದೇನೆ. ಜನಪರ ಕಾಳಜಿ ಹೊಂದಿರುವ ಷಣ್ಮುಖ ಅವರು ಜಿಲ್ಲೆಯ ನೀರಾವರಿ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ’ ಎಂದು ಡಿ.ಓ.ಮುರಾರ್ಜಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಧನಂಜಯಕುಮಾರ್‌ ಮಾತನಾಡಿ, ‘ಮಾಸಾಶನ ಮಂಜೂರಾತಿ ರಾಜ್ಯ ಸಮಿತಿ ಸದಸ್ಯರಾಗಿರುವ ಮುರಾರ್ಜಿ ಅವರಿಗೆ ಎರಡೂ ಜವಾಬ್ದಾರಿ ನಿಭಾಯಿಸುವುದು ಕಷ್ಟ. ಹಾಗಾಗಿ ಚುನಾವಣಾ ಕಣದಿಂದ ನಿವೖತ್ತಿಯಾಗುವ ಅನಿವಾರ್ಯತೆ ಸೖಷ್ಟಿಯಾಯಿತು. ಹೋರಾಟ ಮನೋಭಾವದ ಷಣ್ಮುಖ ಅವರನ್ನು ಬೆಂಬಲಿಸಲು ನಿರ್ಣಯಿಸಲಾಯಿತು’ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಬಿ.ಟಿ.ಲೋಲಾಕ್ಷಮ್ಮ, ಕನ್ನಡ ಸಾಹಿತ್ಯ ಪರಿಷತ್ತಿನ ಮೊಳಕಾಲ್ಮುರು ಘಟಕದ ಮಾಜಿ ಪ್ರಧಾನ ಕಾರ್ಯದರ್ಶಿ ಎನ್.ನೀಲರಾಜ್, ಶಾರದಾ ಬ್ರಾಸ್ ಬ್ಯಾಂಡ್‌ನ ಗುರುಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಶಿವಣ್ಣ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು