ಚಿತ್ರದುರ್ಗ: ಲಾರಿ ಚಾಲಕನ ಮೇಲೆ ತಹಶೀಲ್ದಾರ್ ಹಲ್ಲೆ

ಚಿತ್ರದುರ್ಗ: ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದರಿಂದ ಕುಪಿತಗೊಂಡ ಮೊಳಕಾಲ್ಮುರು ತಹಶೀಲ್ದಾರ್ ಮಲ್ಲಿಕಾರ್ಜುನ್ ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಚಿತ್ರದುರ್ಗದ ಹೊರವಲಯದಲ್ಲಿ ಈ ಘಟನೆ ನಡೆದಿದೆ.
ಸರ್ವಿಸ್ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ತಹಶೀಲ್ದಾರ್ ಕಾರು ಬಂದಿದೆ. ಈ ವೇಳೆ ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಇದರಿಂದ ಕುಪಿತಗೊಂಡ ಮಲ್ಲಿಕಾರ್ಜುನ್ ಲಾರಿ ಚಾಲಕನ ಮುಖಕ್ಕೆ ಗುದ್ದಿದ್ದಾರೆ.
ಸ್ಥಳದಲ್ಲಿ ಜಮಾಯಿಸಿದ ಜನರು ತಹಶೀಲ್ದಾರ್ ವರ್ತನೆಯನ್ನು ಪ್ರಶ್ನಿಸಿದ್ದಾರೆ. ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.