ಶನಿವಾರ, ಜನವರಿ 16, 2021
27 °C

ಸಂಪುಟ ವಿಸ್ತರಣೆ ಕುರಿತು ವರಿಷ್ಠರೊಂದಿಗೆ ಇಂದು ಚರ್ಚೆ: ಬಿ.ಎಸ್.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

BSY

ಚಿತ್ರದುರ್ಗ: ‘ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆಗಳು ನಡೆಯುತ್ತಿವೆ. ಇನ್ನೆರಡು ಅಥವಾ ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಲಿದೆ. ವರಿಷ್ಠರೊಂದಿಗೆ ಇಂದು ಚರ್ಚೆ ಮಾಡಲಿದ್ದೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಇಲ್ಲಿನ ಮುರುಘಾ ಮಠದ ಮುರುಘಾಶ್ರೀ ಮ್ಯೂಸಿಯಂ ಉದ್ಘಾಟನೆಗೆ ಚಿತ್ರದುರ್ಗಕ್ಕೆ ಭಾನುವಾರ ಆಗಮಿಸಿದ ಅವರು ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಇದನ್ನೂ ಓದಿ: 

ಸಂಪುಟ ವಿಸ್ತರಣೆಯಲ್ಲಿ ಯಾವುದೇ ಗೊಂದಲ ಇಲ್ಲ. ಸಂಪುಟದಲ್ಲಿ ಯಾರಿಗೆ ಸ್ಥಾನ ನೀಡಬೇಕು ಎಂಬುದನ್ನು ವರಿಷ್ಠರು ನಿರ್ಧರಿಸಲಿದ್ದಾರೆ. ಶಿವಮೊಗ್ಗ ಪ್ರವಾಸ ಮುಗಿಸಿ ಸಂಜೆ ಬೆಂಗಳೂರಿಗೆ ಮರಳಿದ ಬಳಿಕ ಸಂಪುಟ ವಿಸ್ತರಣೆ ಕಾರ್ಯದಲ್ಲಿ ಮಗ್ನನಾಗಲಿದ್ದೇನೆ ಎಂದು ಹೇಳಿದರು. 

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ 17 ಜನರಿಗೂ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ನಿರಾಕರಿಸಿದರು. ಮೆಕ್ಕೆಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ರೈತ ಸಂಘದ ಮುಖಂಡರು ಮನವಿ ಮಾಡಿದರು.

ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಎಂ. ಚಂದ್ರಪ್ಪ, ಗೂಳಿಹಟ್ಟಿ ಶೇಖರ್, ಕರ್ನಾಟಕ ಮಿನರಲ್ಸ್ ನಿಗಮ‌ ಮಂಡಳಿ ಅಧ್ಯಕ್ಷರಾದ ಎಸ್. ಲಿಂಗಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬದರೀನಾಥ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು