ಭಾನುವಾರ, ಡಿಸೆಂಬರ್ 4, 2022
19 °C

ಲೈಂಗಿಕ ಕಿರುಕುಳ ನೀಡಿದ ಆರೋಪ: ಮುರುಘಾಶ್ರೀ ಜಾಮೀನು ಅರ್ಜಿ ತಿರಸ್ಕೃತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ/ಶಿವಮೊಗ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿಯನ್ನು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಶಿವಮೂರ್ತಿ ಮುರುಘಾ ಶರಣರನ್ನು ಸೆ.1ರಂದು ಬಂಧಿಸಲಾಗಿದೆ. ಹೀಗಾಗಿ ಅವರು ಜಾಮೀನು ಕೋರಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇದಕ್ಕೆ ತಕರಾರು ಸಲ್ಲಿಸಿದ್ದ ವಿಶೇಷ ಸರ್ಕಾರಿ ವಕೀಲೆ ಕೆ.ಬಿ. ನಾಗವೇಣಿ, 'ಬಂಧಿತ ಆರೋಪಿ ಪ್ರಭಾವಿಯಾಗಿದ್ದು, ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ’ ಎಂದು ವಾದಿಸಿದ್ದರು.

ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಅವರು ವಕೀಲರ ವಾದವನ್ನು ಪರಿಗಣಿಸಿದ್ದು, ಶರಣರ ಅರ್ಜಿ ತಿರಸ್ಕರಿಸಿದರು.

ಇದನ್ನೂ ಓದಿ: 

ಚಿತ್ರದುರ್ಗಕ್ಕೆ ವಾಪಸ್‌
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಶರಣರನ್ನು ಶಿವಮೊಗ್ಗದ ಮೆಗ್ಗಾನ್‌ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿತ್ತು. ಅದರಂತೆ ಅವರನ್ನು ಬುಧವಾರ ರಾತ್ರಿ ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಕರೆತರಲಾಗಿತ್ತು.

ಸದ್ಯ ಆರೋಗ್ಯ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಶರಣರನ್ನು ಆಸ್ಪತ್ರೆಯಿಂದ ಚಿತ್ರದುರ್ಗದ ಕಾರಾಗೃಹಕ್ಕೆ ವಾಪಸ್‌ ಕರೆದೊಯ್ಯಲಾಗಿದೆ.

'ವೈದ್ಯಕೀಯ ಪ್ರಕ್ರಿಯೆಯ ವರದಿಯನ್ನು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆಸ್ಪತ್ರೆಯಿಂದ ಬಿಡುಗಡೆ ಆಗುವಾಗ ಶರಣರು ಆರೋಗ್ಯವಾಗಿದ್ದಾರೆ' ಎಂದು ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ವಿರೂಪಾಕ್ಷಪ್ಪ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು