ಚಿತ್ರದುರ್ಗ: ಕಾಂಗ್ರೆಸ್ ಮುಖಂಡರಾದ ವಿ.ಎಸ್. ಉಗ್ರಪ್ಪ ಹಾಗೂ ಸಲೀಂ ಅವರಿಗೆ ತಮ್ಮ ಪಕ್ಷದ ಭ್ರಷ್ಟಾಚಾರದ ಬಗ್ಗೆ ತಡವಾಗಿ ಜ್ಞಾನೋದಯ ಆಗಿದೆ. ಈವರೆಗೆ ಈ ವಿಚಾರ ಮುಚ್ಚಿಟ್ಟಿದ್ದು ಏಕೆ ಎಂಬುದನ್ನು ಬಹಿರಂಗಪಡಿಸಬೇಕು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಆಗ್ರಹಿಸಿದರು.

ಮುರುಘಾ ಮಠದಲ್ಲಿ ಬುಧವಾರ ನಡೆದ ಕೃಷಿ ಮೇಳದಲ್ಲಿ ಪಾಲ್ಗೊಂಡ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

'ಸತ್ಯಾಸತ್ಯತೆಯನ್ನು ಕಾಂಗ್ರೆಸ್ ನಾಯಕರು ತಡವಾಗಿ ಬಾಯಿ ಬಿಟ್ಟಿದ್ದಾರೆ. ಕಾಂಗ್ರೆಸ್ ನಲ್ಲಿ ದೊಡ್ಡ ಮಟ್ಟದ ಒಳಜಗಳ ನಡೆಯುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕಂಡರೆ ಬೇರೆಯವರಿಗೆ ಆಗಲ್ಲ. ಸಿದ್ದರಾಮಯ್ಯ ಅವರೊಂದಿಗಿನ ಮುನಿಸು ಅಂತ್ಯ ಕಂಡಿಲ್ಲ' ಎಂದು ಹೇಳಿದರು.

'ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಂಘಪರಿವಾರದ ಕಾರ್ಯಕರ್ತರ ಕೊಲೆ ನಡೆಯಿತು. ಹಿಂದೂಗಳನ್ನು ನಿಂದಿಸಿದರೆ ಮುಸ್ಲಿಮರು ಕಾಂಗ್ರೆಸ್ ಪರ ನಿಲ್ಲಲಿದ್ದಾರೆ ಎಂಬ ಭ್ರಮೆ ಸಿದ್ಧರಾಮಯ್ಯ ಅವರಲ್ಲಿದೆ. ಈ ಭ್ರಮೆಯಿಂದ ಅವರು ಹೊರ ಬರಬೇಕು' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.