ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾನು, ಡಿ. ಕೆ. ಶಿವಕುಮಾರ್ ಇಬ್ಬರೇ ಪಾದಯಾತ್ರೆ ಮಾಡುತ್ತೇವೆ: ಸಿದ್ದರಾಮಯ್ಯ

Last Updated 6 ಜನವರಿ 2022, 9:26 IST
ಅಕ್ಷರ ಗಾತ್ರ

ಚಿತ್ರದುರ್ಗ:'ಕೋವಿಡ್ ಮಾರ್ಗಸೂಚಿ ಪಾಲಿಸಿಯೇ ಪಾದಯಾತ್ರೆ ಮಾಡಲಾಗುವುದು. ಕೋವಿಡ್ ಹರಡದೇ ಇರುವಂತೆ ಮಾಸ್ಕ್ ಧರಿಸಿ ಮುನ್ನೆಚ್ಚರಿಕೆ ಕೈಗೊಳ್ಳಲಾಗುವುದು. ನಿಷೇಧಾಜ್ಞೆ ಹೇರಿ ಜನರು ಬಾರದಂತೆ ತಡೆದರೆ ನಾನು ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೇ ಪಾದಯಾತ್ರೆ ಮಾಡುತ್ತೇವೆ' ಎಂದುವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಇಲ್ಲಿನ ಮಾಚಿದೇವ ಗುರುಪೀಠದಲ್ಲಿ ಗುರುವಾರ ಹಮ್ಮಿಕೊಂಡ ಸಮಾರಂಭದಲ್ಲಿ ಮಾಚಿದೇವ ರತ್ನ ಪ್ರಶಸ್ತಿ ಸ್ವೀಕರಿಸಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ನೆಲೆಯನ್ನು ವಿಸ್ತರಣೆ ಮಾಡುವ ಉದ್ದೇಶದಿಂದ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿವೆ. ಹೀಗಾಗಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಮೇಕೆದಾಟು ಯೋಜನೆಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ದಪಡಿಸಲಾಗಿತ್ತು. 2018ರವರೆಗೂ ಇದರ ಅನುಷ್ಠಾನಕ್ಕೆ ಪ್ರಯತ್ನ ಮಾಡಲಾಯಿತು. ಎರಡೂವರೆ ವರ್ಷದಿಂದ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ, ತಮಿಳುನಾಡಿಗೆ ಕುಮ್ಮಕ್ಕು ನೀಡುತ್ತಿದೆ. ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ಅವರ ಪ್ರತಿಭಟನೆ ಫಲವಾಗಿ ಯೋಜನೆ ಅನುಷ್ಠಾನಕ್ಕೆ ತರುತ್ತಿಲ್ಲ' ಎಂದು ಆರೋಪ ಮಾಡಿದರು.

'ನಮ್ಮದು ರಾಜಕೀಯ ಪಕ್ಷ. ಆದರೆ, ಮೇಕೆದಾಟು ವಿಚಾರದಲ್ಲಿ ರಾಜಕೀಯ ಮಾಡುತ್ತಿಲ್ಲಿ. ರಾಜಕೀಯ ಅಜೆಂಡಾಕ್ಕೆ ಇದನ್ನು ಬಳಸಿಕೊಳ್ಳುತ್ತಿಲ್ಲ' ಎಂದು ಹೇಳಿದ ಸಿದ್ದರಾಮಯ್ಯ ಅವರು, 'ಕೋಡಿಹಳ್ಳಿ ಚಂದ್ರಶೇಖರ್ ಯಾರು? ಅವರು ರೈತ ಮುಖಂಡರಾ' ಎಂದು ಪ್ರಶ್ನಿಸಿದರು.

'ದೇವಸ್ಥಾನಗಳು ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಇವೆ. ಅವುಗಳನ್ನು, ಆರ್ ಎಸ್ ಎಸ್ ಕೈಗೆ ಕೊಡಬೇಡಿ ಎಂದು ಒತ್ತಾಯಿಸುತ್ತಿದ್ದೇವೆ. ಆರ್ ಎಸ್ ಎಸ್ ಎದುರು ಭಕ್ತರು ಕೈಮುಗಿದು ನಿಲ್ಲಬೇಕಾಗುತ್ತದೆ. ಈ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವ ನಳೀನ್ ಕುಮಾರ್ ಕಟೀಲ್ ಅವರಿಗೆ ರಾಜಕೀಯವಾಗಿ ಬುದ್ದಿ ಬೆಳೆದಿಲ್ಲ' ಎಂದು ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT