ಚಿತ್ರದುರ್ಗ: ಪಕ್ಷಕ್ಕೆ ವಾಪಸ್ಸು ಬಂದರೆ ಕೇಳಿದ ಸ್ಥಾನಮಾನ ನೀಡುತ್ತೇವೆ ಎಂದು ಕಾಂಗ್ರೆಸ್ ಹೈಕಮಾಂಡ್ ಆಹ್ವಾನ ನೀಡಿದೆ. ಇಂತಹ ಯಾವುದೇ ಆಮಿಷಕ್ಕೆ ನಾನು ಮಣಿಯುವುದಿಲ್ಲ ಎಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ.ರಘು ಆಚಾರ್ ತಿಳಿಸಿದರು.

‘ಕಾಂಗ್ರೆಸ್ ಮುಖಂಡರೊಬ್ಬರು ನಮ್ಮ ಮನೆಗೆ ಬಂದಿದ್ದರು. ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಶಾಲು ಹಾಕಿಕೊಂಡು ಕಾಂಗ್ರೆಸ್ ಪರ ಪ್ರಚಾರ ಮಾಡುವಂತೆ ಕೇಳಿಕೊಂಡರು. ನಾನು ಈ ನೆಲದ ಜನರ ನಿರ್ಧಾರದಂತೆ ಚುನಾವಣೆಗೆ ಸ್ಪರ್ಧಿಸಿದ್ದೇನೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳಿದ್ದ ನನ್ನ ತಂಗಿ ಹಾಗೂ ಪತ್ನಿಗೆ ನಗರಸಭೆ ಸದಸ್ಯ ಮಲ್ಲಿಕಾರ್ಜುನ್ ಬೆದರಿಕೆ ಹಾಕಿದ್ದಾರೆ. ಹೆಣ್ಣು ಮಕ್ಕಳ ಬಗ್ಗೆ ಹಗುರವಾಗಿ ಮಾತನಾಡುವುದು ಒಳ್ಳೆಯದಲ್ಲ. ಅದೇ ವಾರ್ಡ್‌ನಲ್ಲಿ ನಾನು ಪ್ರಚಾರ ನಡೆಸುತ್ತೇನೆ’ ಎಂದು ಸವಾಲ್ ಹಾಕಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ತಿಮ್ಮಣ್ಣ, ಯುವ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಪ್ರತಾಪ್ ಜೋಗಿ, ರಾಜ್ಯ ಕಾರ್ಯದರ್ಶಿ ಎಸ್.ಶಿವಪ್ರಸಾದ್, ಅನಿಲ್, ಪುನೀತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.