ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕವಾಡಿಗರ ಹಟ್ಟಿ ಕಲುಷಿತ ನೀರು ಪ್ರಕರಣ: ತಲಾ ₹ 5 ಲಕ್ಷ ಪರಿಹಾರ ಬಿಡುಗಡೆ

Published 4 ಆಗಸ್ಟ್ 2023, 20:30 IST
Last Updated 4 ಆಗಸ್ಟ್ 2023, 20:30 IST
ಅಕ್ಷರ ಗಾತ್ರ

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟಿರುವ ಮೂವರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ ₹ 5 ಲಕ್ಷ ಪರಿಹಾರ ಬಿಡುಗಡೆ ಮಾಡಲಾಗಿದೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಪರಿಹಾರ ನಿಧಿಯಿಂದ ಹಣ ಬಿಡುಗಡೆ ಮಾಡಲಾಗಿದೆ. ಮೃತರಾದ ಮಂಜುಳಾ, ರಘು ಮತ್ತು ಪ್ರವೀಣ್‌ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ ಪಾವತಿಗೆ ಆದೇಶಿಸಲಾಗಿದೆ’ ಎಂದು ಮುಖ್ಯಮಂತ್ರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್‌ ಅವರ ಮನವಿ ಹಾಗೂ ಜಿಲ್ಲಾಧಿಕಾರಿ ಸಲ್ಲಿಸಿದ ವರದಿ ಆಧರಿಸಿ ಪರಿಹಾರ ಪಾವತಿಗೆ ಆದೇಶಿಸಲಾಗಿದೆ ಎಂದು ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT