ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪೇಗೌಡರ ಶ್ರಮ, ತ್ಯಾಗ ಅಪಾರ: ಬಿ.ಧನಂಜಯ

ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ
Last Updated 27 ಜೂನ್ 2021, 12:08 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ದೇಶದ ಸಿಲಿಕಾನ್‌ ಸಿಟಿ, ಉದ್ಯಾನ ನಗರಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರನ್ನು ಸುಂದರವಾಗಿ ನಿರ್ಮಿಸುವಲ್ಲಿ ನಾಡಪ್ರಭು ಕೆಂಪೇಗೌಡರ ಶ್ರಮ, ತ್ಯಾಗ ಅಪಾರವಾದುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಧನಂಜಯ ಅಭಿಪ್ರಾಯಪಟ್ಟರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಭಾನುವಾರ ಸರಳವಾಗಿ ನಡೆದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.

‘ಕೆಂಪೇಗೌಡರಿಗೆ ದೂರದೃಷ್ಟಿ ಇತ್ತು. ಜಾತ್ಯತೀತ ಮನೋಭಾವ ಹೊಂದಿದ್ದ ಅವರು ಧರ್ಮ ಸಹಿಷ್ಣುತೆ ಮತ್ತು ಪ್ರಜಾವಾತ್ಸಲ್ಯದಂತಹ ಅಪರೂಪದ ಗುಣಗಳಿಂದಾಗಿ ಇಂದಿಗೂ ಸ್ಮರಣೀರಾಗಿದ್ದಾರೆ’ ಎಂದು ಬಣ್ಣಿಸಿದರು.

‘ಕೆಂಪೇಗೌಡರ ತತ್ವಾದರ್ಶ ಎಲ್ಲರೂ ಅಳವಡಿಸಿಕೊಳ್ಳಬೇಕು. ಅವರ ಹಾದಿಯಲ್ಲಿ ಎಲ್ಲರೂ ನಡೆಯಬೇಕು. ಇಂತಹ ಮಹಾನ್ ನಾಯಕರ ನಿಷ್ಠೆ, ಪ್ರಾಮಾಣಿಕತೆಯನ್ನು ಯುವಸಮೂಹ ಮೈಗೂಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಮುಖಂಡರಾದ ಹನುಮಂತಪ್ಪ, ಜಗನ್ನಾಥ್, ಗುನ್ನಯ್ಯ, ಶಿಕ್ಷಕ ಚಿದಾನಂದ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT