ಗುರುವಾರ , ಅಕ್ಟೋಬರ್ 28, 2021
18 °C
ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಮೆಚ್ಚುಗೆ

ಖಜಾನೆ ಇಲಾಖೆ ಪಾತ್ರ ಹಿರಿದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ರಾಜ್ಯ ಮತ್ತು ಕೇಂದ್ರ ಸರ್ಕಾರ ಜಾರಿಗೆ ತರುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದಲ್ಲಿ ಖಜಾನೆ ಇಲಾಖೆಯ ಪಾತ್ರ ಮಹತ್ವದ್ದು ಎಂದು ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಅಭಿಪ್ರಾಯಪಟ್ಟರು.

ಇಲ್ಲಿನ ತರಾಸು ರಂಗಮಂದಿರದಲ್ಲಿ ಶನಿವಾರ ನಡೆದ ರಾಜ್ಯ ಖಜಾನೆ ನೌಕರರ ಸಂಘದ ಕಾರ್ಯಕಾರಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

‘ಹಣಕಾಸು ಇಲಾಖೆ ಮುಖ್ಯಮಂತ್ರಿ ಬಳಿಯೇ ಇದೆ. ಅಧಿಕಾರಕ್ಕೆ ಬರುವ ಬಹುತೇಕ ಎಲ್ಲ ಮುಖ್ಯಮಂತ್ರಿಗಳು ಈ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಳ್ಳಲು ಬಯಸುತ್ತಾರೆ. ಮುಖ್ಯಮಂತ್ರಿಯೊಂದಿಗೆ ಇಲಾಖೆ ಅಧಿಕಾರಿಗಳು ಹಾಗೂ ನೌಕರರ ಒಡನಾಟ ಸಹಜವಾಗಿಯೇ ಹೆಚ್ಚು. ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಿಸ್ತಿನಿಂದ ಇದ್ದಾರೆ’ ಎಂದು ಹೇಳಿದರು.

‘ಖಜಾನೆ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗ ಅನೇಕ ಸಮಸ್ಯೆ ಎದುರಿಸುತ್ತಿರುವುದು ಗಮನಕ್ಕೆ ಬಂದಿದೆ. ರಾಜ್ಯದ ಎಲ್ಲ ಶಾಸಕರ ಗಮನ ಸೆಳೆದು ಇಲಾಖೆಯ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಡುವುದು ಒಳಿತು. ಇವುಗಳ ಪರಿಹಾರಕ್ಕೆ ಶಕ್ತಿಮೀರಿ ಶ್ರಮಿಸಲಾಗುವುದು’ ಎಂದು ಭರವಸೆ ನೀಡಿದರು.

ರಾಜ್ಯ ಖಜಾನೆ ನೌಕರರ ಸಂಘದ ಅಧ್ಯಕ್ಷ ಜಿ.ಜಗದೀಶ್, ಗೌರವಾಧ್ಯಕ್ಷ ಎಂ.ಆರ್.ರಾಜಣ್ಣ, ಇಲಾಖೆ ನಿವೃತ್ತ ಜಂಟಿ ನಿರ್ದೇಶಕರಾದ ಜಯಣ್ಣ, ಕೆ.ಟಿ.ವಿಜಯ್‍ಕೃಷ್ಣಕುಮಾರ್, ಸಹಾಯಕ ನಿರ್ದೇಶಕ ಸುನೀಲ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.