ಗುರುವಾರ , ಮಾರ್ಚ್ 30, 2023
22 °C

ಎಚ್ಚರ ಕಳೆದುಕೊಂಡ ಚಾಲಕ; ಸಮಯಪ್ರಜ್ಞೆ ಮೆರೆದು ಅವಘಡ ತಪ್ಪಿಸಿದ ನಿರ್ವಾಹಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರಿಯೂರು: ದಾವಣಗೆರೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕ ಇದ್ದಕ್ಕಿದ್ದಂತೆ ಎಚ್ಚರತಪ್ಪಿದ್ದಾರೆ. ಈ ವೇಳೆ ಸಮಯಪ್ರಜ್ಞೆ ಮೆರೆದ ನಿರ್ವಾಹಕ ಹ್ಯಾಂಡ್ ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಿ ಸಂಭವಿಸಬಹುದಾಗಿದ್ದ ಅವಘಡವನ್ನು ತಪ್ಪಿಸಿರುವ ಘಟನೆ ನಗರದ ಗಾಂಧಿ ವೃತ್ತದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

50 ವರ್ಷ ವಯಸ್ಸಿನ ಚಾಲಕ ರವಿ ಇದ್ದಕ್ಕಿದ್ದಂತೆ ಎಚ್ಚರ ತಪ್ಪಿದಾಗ ನಿರ್ವಾಹಕ ಗಂಗಾಧರ್ ಹ್ಯಾಂಡ್ ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಿದ್ದಾರೆ. ತಕ್ಷಣ ರವಿ ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಬಸ್ಸಿನಲ್ಲಿ 10 ಪ್ರಯಾಣಿಕರಿದ್ದರು. ಯಾವುದೇ ಅಪಾಯ ಸಂಭವಿಸಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು