ಚಿತ್ರದುರ್ಗ: ನೊಂದ ಮಹಿಳೆಯರಿಗೆ ಸೌಲಭ್ಯ ಒದಗಿಸುವುದು, ವಿಧವಾ ಕೋಶದಿಂದಾಗುವ ಉಪಯೋಗ, ಬಾಲ್ಯವಿವಾಹ ತಡೆಯಲುಅನುಸರಿಸಬೇಕಾದ ಮುಂಜಾಗ್ರತ ಕ್ರಮ, ಓಬವ್ವ ಪಡೆಯ ಕಾರ್ಯ ವೈಖರಿ ಹೇಗೆ...?

ಇಲ್ಲಿನ ವಕೀಲರ ಭವನದಲ್ಲಿ ಬುಧವಾರ ವಿಧವಾ ಕೋಶ, ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಓಬವ್ವ ಪಡೆ ಕುರಿತು ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ನೆರೆದಿದ್ದ ನೂರಾರು ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರಿಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಿ, ಮಾಹಿತಿ ನೀಡಲಾಯಿತು.

ಚಿಕ್ಕ ವಯಸ್ಸಿನಲ್ಲೇ ಹೆಣ್ಣು ಮಕ್ಕಳಿಗೆ ಮದುವೆ ಮಾಡುವುದರಿಂದ ಆಗಬಹುದಾದ ದುಷ್ಪರಿಣಾಮಗಳೇನು? ಮಹಿಳೆಯರಿಗೆ ಉತ್ತಮ ಭವಿಷ್ಯ ಕಲ್ಪಿಸಲು ಅನುಸರಿಸಬೇಕಾದ ಕ್ರಮಗಳೇನು ಎಂಬುದನ್ನು ವಿವರಿಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ಬಿ.ವಸ್ತ್ರಮಠ ಅವರು, ಬಾಲ್ಯವಿವಾಹವನ್ನು ತಡೆಯಲು ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದರು.

ಮಹಿಳೆಯರ ಸಮಸ್ಯೆ ಆಲಿಸಿ ಪರಿಹಾರ ಸೂಚಿಸುವ ಮನೋಧರ್ಮ ಕುಟುಂಬಗಳಲ್ಲಿ, ಅಧಿಕಾರಿಗಳಲ್ಲಿ, ಪೊಲೀಸರಲ್ಲಿ ಬರಬೇಕು. ಯಾವ ಮಹಿಳೆಯೇ ಆಗಲಿ ನೊಂದು ಅಪಾಯ ತಂದುಕೊಳ್ಳುವ ಸ್ಥಿತಿಗೆ ತಲುಪದಂತೆ ನೋಡಿಕೊಳ್ಳಲು ಮುಂದಾಗಬೇಕಿದೆ ಎಂದು ಸಲಹೆ ನೀಡಿದರು.

ಮನೆಯಾಗಲಿ, ಕಚೇರಿಯಾಗಲಿ, ಯಾವುದೇ ಸ್ಥಳದಲ್ಲಾಗಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದರೆ ತಕ್ಷಣ ದೂರು ದಾಖಲಿಸಿಕೊಂಡು ತನಿಖೆ ನಡೆಸಲು ಕಾರ್ಯ ಪ್ರವೃತ್ತರಾಗಬೇಕು. ಯಾವ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂದ ಅವರು, ಪ್ರಸ್ತುತ ಜಾರಿಗೆ ತಂದಿರುವ ಕಾನೂನುಗಳು ಮಹಿಳೆಯರ ಪರವಾಗಿಯೇ ಇವೆ. ಆದರೆ, ಕೆಲವರು ಇದನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆಯಲ್ಲ. ಕಾನೂನು ಇರುವುದು ಸದ್ಬಳಕೆ ಮಾಡಿಕೊಳ್ಳಲಿಕ್ಕೆ ಹೊರತು ದುರ್ಬಳಕೆ ಸಲ್ಲದು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ್ ಎಂ.ಜೋಶಿ ಮಾತನಾಡಿ, ಮಕ್ಕಳು ಮತ್ತು ಮಹಿಳೆಯರ ರಕ್ಷಣೆ ಹಾಗೂ ಪುಂಡರ ಹಾವಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಓಬವ್ವ ಪಡೆ ಕಾರ್ಯ ನಿರ್ವಹಿಸುತ್ತಿದೆ. ಯಾವ ರೀತಿಯ ಅಪಾಯಗಳು ಸಂಭವಿಸುತ್ತವೆ, ದೌರ್ಜನ್ಯ ಎಸಗಲು ಬರುವವರಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎಂಬ ಕುರಿತು ಕೂಡ ಕೆಲವೆಡೆ ಜಾಗೃತಿ ಮೂಡಿಸುತ್ತಿದ್ದಾರೆ ಎಂದರು.

ಶಾಲಾ-ಕಾಲೇಜು, ವಸತಿ ನಿಲಯಗಳ ಬಳಿ ಓಬವ್ವ ಪಡೆ ಸಿಬ್ಬಂದಿ ಮುಫ್ತಿಯಲ್ಲಿ ತಿರುಗುತ್ತಾರೆ. ವಿದ್ಯಾರ್ಥಿನಿಯರನ್ನು ಚುಡಾಯಿಸುವ, ಕಿರುಕುಳ ನೀಡುವವರ ಮೇಲೆ ದಾಳಿ ನಡೆಸಿ ಬಂಧಿಸುತ್ತಾರೆ. ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ದೂರುಗಳು ಬಂದ ತಕ್ಷಣ ಸ್ಥಳಕ್ಕೆ ಧಾವಿಸುತ್ತಾರೆ ಎಂದು ಕಾರ್ಯ ವೈಖರಿ ಬಗ್ಗೆ ವಿವರಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ್ ಮಾತನಾಡಿ,ವಿಧವಾ ಕೋಶ ಕಾಯ್ದೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪ್ರಯತ್ನಿಸುತ್ತಿದ್ದೇವೆ. ವಿಧವೆಯರ ಸಮಸ್ಯೆಗಳಿಗೆ ಪರಿಹಾರ ನೀಡಲು ಜಿಲ್ಲಾ ಕೇಂದ್ರ ಸೇರಿ ಪ್ರತಿ ತಾಲ್ಲೂಕಿನಲ್ಲೂ ಜಂಟಿ ಖಾತೆಯಡಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ಎನ್.ರವೀಂದ್ರ, ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಆರ್.ದಿಂಡಾಲಕೊಪ್ಪ, ವಕೀಲರ ಸಂಘದ ಅಧ್ಯಕ್ಷ ಎನ್.ಬಿ.ವಿಶ್ವನಾಥ್, ವಿವಿಧ ನ್ಯಾಯಾಧೀಶರು ಇದ್ದರು.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಕೀಲರ ಸಂಘದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.