ಚಳ್ಳಕೆರೆ: ಜೀತ ಪದ್ಧತಿ ನಿರ್ಮೂಲನೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ಮಾಡಬೇಕು ಎಂದು ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶ ಪುನೀತ್ ಬಿ.ಆರ್ ಹೇಳಿದರು.

ಜೀತ ಪದ್ಧತಿ ನಿರ್ಮೂಲನ ದಿನಾಚರಣೆ ಅಂಗವಾಗಿ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ತಾಲ್ಲೂಕು ಆಡಳಿತ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಪೋಲೀಸ್ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು - ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜೀತ ಪದ್ಧತಿಯಿಂದ ಮುಕ್ತರಾದವರಿಗೆ ನ್ಯಾಯಂಗದ ಮೂಲಕ ಪುನರ್ವಸತಿ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತ ಕಾನೂನು ನೆರವು ನೀಡಲಾಗುತ್ತದೆ ಎಂದು ಹೇಳಿದರು.

ಜೀತ ಪದ್ಧತಿ ನಿರ್ಮೂಲನೆಗೆ ತಾಲ್ಲೂಕು ಆಡಳಿತ ಬದ್ಧವಾಗಿದ್ದು, ತಾಲ್ಲೂಕಿನಲ್ಲಿ ಜೀತ ಪದ್ದತಿ ಗಮನಕ್ಕೆ ಬಂದರೆ ತಕ್ಷಣವೇ ತಾಲ್ಲೂಕು ಆಡಳಿತಕ್ಕೆ ತಿಳಿಸಬೇಕು. ಆ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ರೇಹಾನ್ ಪಾಷ ಹೇಳಿದರು.

ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಆರ್. ಆಶ್ವತ್ ನಾಯಕ, ಬಿ.ಟಿ. ಶ್ಯಾಮಲಾ, ಉಪನ್ಯಾಸಕ ಕುಮಾರಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್, ಇನ್ಸ್ಪೆಕ್ಟರ್ ಈರೇಶ, ಕಾರ್ಮಿಕ ನಿರೀಕ್ಷಕಿ ಟಿ. ಕುಸುಮಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.