ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುರುಡೇಕಟ್ಟೆ ಬೆಟ್ಟದಲ್ಲಿ ಚಿರತೆ ಸೆರೆ

Last Updated 30 ನವೆಂಬರ್ 2020, 12:41 IST
ಅಕ್ಷರ ಗಾತ್ರ

ಹೊಸದುರ್ಗ: ತಾಲ್ಲೂಕಿನ ಕಸಬಾ ಹೋಬಳಿ ಬುರುಡೇಕಟ್ಟೆ ಗ್ರಾಮದ ರಂಗನಾಥಸ್ವಾಮಿ ಬೆಟ್ಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಸೋಮವಾರ ನಸುಕಿನಲ್ಲಿ ಚಿರತೆ ಸೆರೆಯಾಗಿದೆ.

ಸುಮಾರು 3 ವರ್ಷದ ಚಿರತೆ ಈ ಭಾಗದಲ್ಲಿ ಮೂರ್ನಾಲ್ಕು ತಿಂಗಳಿನಿಂದಲೂ ಕಾಣಿಸಿಕೊಂಡಿತ್ತು. ಇದರಿಂದ ಜನರು ಆತಂಕದಲ್ಲಿದ್ದರು. ರೈತರು ಜಮೀನಿಗೆ ಹೋಗಲು ಭಯಪಡುತ್ತಿದ್ದರು. ಜನರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇಟ್ಟಿದ್ದರು.

ಬೋನಿನೊಳಗೆ ಹಸು ಕಟ್ಟಿ ಕಾರ್ಯಾಚರಣೆ ನಡೆಸಿ ಚಿರತೆ ಸೆರೆ ಹಿಡಿಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಸೆರೆಯಾದ ಚಿರತೆ ನೋಡಲು ಜನರು ತಂಡೋಪ ತಂಡವಾಗಿ ಬಂದಿದ್ದರು. ಅಧಿಕಾರಿಗಳು ಚಿರತೆಯನ್ನು ಚಿತ್ರದುರ್ಗದ ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೆ ಸಾಗಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT