ಗುರುವಾರ , ಜನವರಿ 28, 2021
27 °C

ಹೊಸದುರ್ಗ: ಬೋನಿಗೆ ಬಿದ್ದ ಚಿರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

leopard

ಹೊಸದುರ್ಗ (ಚಿತ್ರದುರ್ಗ): ಹೊಸದುರ್ಗ ತಾಲ್ಲೂಕಿನ ಕಸಬಾ ಹೋಬಳಿಯ ಬುರುಡೇಕಟ್ಟೆ ಗ್ರಾಮದ ರಂಗನಾಥಸ್ವಾಮಿ ಬೆಟ್ಟದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಸೋಮವಾರ ನಸುಕಿನಲ್ಲಿ ಚಿರತೆ ಸೆರೆಯಾಗಿದೆ.

ಸುಮಾರು ಮೂರು ವರ್ಷದ ಚಿರತೆ, ಕೆಲ ದಿನಗಳಿಂದ ಕಾಣಿಸಿಕೊಂಡಿತ್ತು. ಇದರಿಂದಾಗಿ ಜನರು ಆತಂಕದಲ್ಲಿದ್ದರು. ರೈತರು ಜಮೀನಿಗೆ ಹೋಗಲು ಭಯಪಡುತ್ತಿದ್ದರು. 

ಜನರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟಿದ್ದರು. ಅದರೊಳಗೆ ಹಸು ಕಟ್ಟಿ ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸೆರೆಯಾದ ಚಿರತೆಯನ್ನು ಜನರು ತಂಡೋಪತಂಡವಾಗಿ ಬಂದು ವೀಕ್ಷಿಸಿದರು. ಚಿತ್ರದುರ್ಗದ ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೆ ಚಿರತೆ ಸಾಗಿಸಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.