7

ಬೋನಿಗೆ ಬಿದ್ದ ಚಿರತೆ

Published:
Updated:

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಎನ್‌ಇಎಸ್‌ ಬಡಾವಣೆಯಲ್ಲಿ ಇಟ್ಟಿದ್ದ ಬೋನಿಗೆ ಮಂಗಳವಾರ ನಸುಕಿನಲ್ಲಿ ಬಿದ್ದಿದೆ.

ಸತತ ಒಂದು ವಾರದಿಂದ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆ ಕೊನೆಗೂ ಫಲ ನೀಡಿದೆ. ಇದರಿಂದ ಸುತ್ತಲಿನ ಬಡಾವಣೆಯ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಸೆರೆಯಾದ ಚಿರತೆಯನ್ನು ಚಿತ್ರದುರ್ಗದ ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೆ ಸಾಗಿಸುವುದಾಗಿ ಆರ್‌ಎಫ್‌ ಭರತ್ ತಳವಾರ್ ತಿಳಿಸಿದ್ದಾರೆ.

ಜುಲೈ 3ರಂದು ಕಾಣಿಸಿಕೊಂಡಿದ್ದ ಚಿರತೆ ಭೂಪಾಳಂ ಬಡಾವಣೆಯ ಹನುಮಕ್ಕ (50) ಎಂಬುವರು ಗಾಯಗೊಳಿಸಿತ್ತು.

ಹನುಮಕ್ಕ ಅವರು ಮನೆ ಕೆಲಸಕ್ಕೆ ಹೋಗುತ್ತಿದ್ದಾಗ ಚಿರತೆ ದಾಳಿ ನಡೆಸಿ ತಲೆ ಹಾಗೂ ಕಾಲುಗಳನ್ನು ಕಚ್ಚಿ ಗಾಯಗೊಳಿಸಿತ್ತು.
 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !