ಚಿತ್ರದುರ್ಗ: ತಾಲ್ಲೂಕಿನ ದೊಡ್ಡಸಿದ್ದವ್ವನ ಹಳ್ಳಿ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಡಿಕ್ಕಿ ಹೊಡೆದು ಚಿರತೆ ಮೃತಪಟ್ಟಿದೆ.
ಚಿರತೆ ಮಂಗಳವಾರ ನಸುಕಿನಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟುವ ಸಂದರ್ಭದಲ್ಲಿ ಈ ಅವಘಡ ನಡೆದಿದೆ.
ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಸಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ವಾಹನ ಪತ್ತೆಯಾಗಿಲ್ಲ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಷ್ಟ್ರೀಯ ಹೆದ್ದಾರಿ ದೊಡ್ಡ ಸಿದ್ದವ್ವನಹಳ್ಳಿ ಸಮೀಪ ನಿರ್ಮಾಣವಾಗಿ ವರ್ಷ ಕಳೆದಿದೆ. ಈ ಅವಧಿಯಲ್ಲಿ ಆರು ಚಿರತೆ ಹಾಗೂ ಒಂದು ಕರಡಿ ಅಪಘಾತಕ್ಕೆ ಬಲಿಯಾಗಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.