ಚಿತ್ರದುರ್ಗ: ‘ಕುಷ್ಠ ರೋಗವು ನಿಗದಿತ ಚಿಕಿತ್ಸೆ ಇದೆ. ಯಾವುದೇ ರೀತಿಯ ಭಯಪಡುವ ಅಗತ್ಯ ಇಲ್ಲ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಜಿ.ಪಿ. ರೇಣುಪ್ರಸಾದ್ ತಿಳಿಸಿದರು.

ಬುದ್ಧನಗರ ಆರೋಗ್ಯ ಕೇಂದ್ರ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಕುಷ್ಠ ರೋಗ ಪತ್ತೆ ಹಚ್ಚುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಸ್ವ ಇಚ್ಛೆಯಿಂದ ಸರ್ಕಾರಿ ಆಸ್ಪತ್ರೆ ವೈದ್ಯರಲ್ಲಿ ಪರೀಕ್ಷೆಗೆ ಒಳಪಡಬೇಕು. ರೋಗ ದೃಢಪಟ್ಟರೆ ಉಚಿತವಾಗಿ ಮನೆ ಬಾಗಿಲಿಗೆ ಔಷಧಿ ಒದಗಿಸಲಾಗುವುದು’ ಎಂದರು.

‘ರೋಗಿಯು ಆಸ್ಪತ್ರೆಯಲ್ಲಿ ದಾಖಲಾಗುವ ಅವಶ್ಯಕತೆ ಇರುವುದಿಲ್ಲ. ರೋಗ ಲಕ್ಷಣಗಳಿಗನುಸಾರ ಆರು ತಿಂಗಳಿಂದ ಒಂದು ವರ್ಷದೊಳಗೆ ಚಿಕಿತ್ಸೆ ಪಡೆದರೆ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು. ಬನ್ನಿ ಎಲ್ಲರೂ ಭಾರತವನ್ನು ಕುಷ್ಠ ರೋಗ ಮುಕ್ತ ಮಾಡಲು ಪ್ರಯತ್ನ ಮಾಡೋಣ’ ಎಂದು ಮನವಿ ಮಾಡಿದರು.

‘ನ.19 ರವರೆಗೆ ಜಿಲ್ಲೆಯಲ್ಲಿ ಆಂದೋಲನ ನಡೆಯಲಿದೆ. 235 ತಂಡಗಳನ್ನು ರಚಿಸಿದ್ದು, ಒಂದು ತಂಡದಲ್ಲಿ ಒಬ್ಬ ಆಶಾ ಕಾರ್ಯಕರ್ತೆ ಮತ್ತು ಪುರುಷ ಸ್ವಯಂ ಸೇವಕರಿದ್ದು, 10 ತಂಡಕ್ಕೆ ಒಬ್ಬರು ಮೇಲ್ವಿಚಾರಕರಂತೆ 23 ಜನ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ಮನೆಗಳಿಗೆ ಭೇಟಿ ನೀಡಿದ ಸಿಬ್ಬಂದಿಗೆ ಸಹಕರಿಸುವುದರ ಜತೆಗೆ ಕುಷ್ಠ ರೋಗದ ಪರೀಕ್ಷೆಗೆ ಒಳಪಡಬೇಕು’ ಎಂದು ಕಾರ್ಯಕ್ರಮ ಅನುಷ್ಠಾನಾಧಿಕಾರಿ ಜಿ.ಓ.ನಾಗರಾಜ್ ತಿಳಿಸಿದರು.

ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಬುದ್ಧನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸುರೇಂದ್ರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸ್, ಡಿಎನ್ಟಿ ತಂಡದ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಚಂದ್ರಪ್ಪ, ಮಂಜುನಾಥ, ಓಂಕಾರ ಸ್ವಾಮಿ, ರಾಜೇಂದ್ರ ಪ್ರಸಾದ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.