ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರು | ಡಿ.27ರಿಂದ ಕುಷ್ಟರೋಗ ಪತ್ತೆ ಅಭಿಯಾನ: ಡಾ.ವೆಂಕಟೇಶ್

Published 22 ಡಿಸೆಂಬರ್ 2023, 12:31 IST
Last Updated 22 ಡಿಸೆಂಬರ್ 2023, 12:31 IST
ಅಕ್ಷರ ಗಾತ್ರ

ಹಿರಿಯೂರು: ತಾಲ್ಲೂಕಿನಲ್ಲಿ ಡಿಸೆಂಬರ್‌ 27ರಿಂದ ಜನವರಿ 11ರವರೆಗೆ ಕುಷ್ಟರೋಗ ಪ್ರಕರಣ ಪತ್ತೆ  ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಹೇಳಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಹಶೀಲ್ದಾರ್ ರಾಜೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಅಭಿಯಾನದಲ್ಲಿ ಎಲ್ಲಾ ಆಶಾ ಕಾರ್ಯಕರ್ತೆಯರು ಮತ್ತು ಸ್ವಯಂಸೇವಕರು ಶಂಕಿತ ಕುಷ್ಟರೋಗ ಪ್ರಕರಣಗಳನ್ನು ಪತ್ತೆ ಹಚ್ಚಲಿದ್ದಾರೆ. 51 ಮೇಲ್ವಿಚಾರಕರ ನೇತೃತ್ವದಲ್ಲಿ ಒಟ್ಟು 274 ಸಮೀಕ್ಷಾ ತಂಡಗಳನ್ನು ನಿಯೋಜಿಸಲಾಗಿದೆ. ಈ ತಂಡಗಳು ಕುಷ್ಟರೋಗದ ಬಗ್ಗೆ ಜಾಗೃತಿ ಮೂಡಿಸಲಿದ್ದು, ಎಲ್ಲ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT