ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪ್ರತಿಮ ದೇಶಭಕ್ತರ ಸ್ಮರಿಸೋಣ: ಎನ್‌. ರವಿಕುಮಾರ್‌

ಚಿತ್ರದುರ್ಗ, ತುರವನೂರಿನಲ್ಲಿ ‘ಅಮೃತ ಭಾರತಿಗೆ ಕನ್ನಡದಾರತಿ’ ಸಂಭ್ರಮ
Last Updated 29 ಮೇ 2022, 4:20 IST
ಅಕ್ಷರ ಗಾತ್ರ

ಚಿತ್ರದುರ್ಗ: ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಾವಿರಾರು ದೇಶ ಭಕ್ತರು ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ. ಗಾಂಧೀಜಿ ಅವರು ಅಹಿಂಸೆ ಹಾಗೂ ಉಪವಾಸದ ಮೂಲಕ ಸ್ವಾತಂತ್ರ್ಯ ಪಡೆಯುವುದಕ್ಕೆ ಕಾರಣರಾದರು ಎಂದು ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌ ತಿಳಿಸಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಗರದ ತರಾಸು ರಂಗಮಂದಿರದಲ್ಲಿ ಜಿಲ್ಲಾಡಳಿತ ದಿಂದ ಆಯೋಜಿಸಿದ್ದ ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಭಗತ್‌ಸಿಂಗ್‌ ಅವರ ಸ್ವಾತಂತ್ರ‍್ಯ ಹೋರಾಟ ಅತ್ಯಂತ ಪ್ರಮುಖವಾಗಿದೆ. ದೇಶದ ಸ್ವಾತಂತ್ರಕ್ಕಾಗಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸುವುದು ಅಗತ್ಯ’ ಎಂದರು.

‘ಭಾರತದ ಸ್ವಾತಂತ್ರ‍್ಯದಲ್ಲಿ ಮತ್ತೊಬ್ಬ ಅಪ್ರತಿಮ ದೇಶಭಕ್ತ ಅಂದರೆ ವೀರ ಸಾವರ್ಕರ್. ಅವರು ಕ್ರಾಂತಿಕಾರಿ ಹೋರಾಟವನ್ನು ನಡೆಸಿದ್ದಾರೆ. ಇವತ್ತಿನ ಯುವ ಸಮುದಾಯ ಸ್ವಾತಂತ್ರ್ಯ ಹೋರಾಟಗಾರರ ಮಾಹಿತಿಗಳನ್ನು ತಿಳಿದುಕೊಳ್ಳಬೇಕು. ಆಗ ಮಾತ್ರ ದೇಶ ನಡೆದು ಬಂದ ದಾರಿಯ ಇತಿಹಾಸ ತಿಳಿದುಕೊಳ್ಳಲು ಸಾಧ್ಯ’ ಎಂದು ಹೇಳಿದರು.

ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಮಾತನಾಡಿ, ‘ಸ್ವಾತಂತ್ರ‍್ಯ ಚಳವಳಿಯಲ್ಲಿ ಭಾಗವಹಿಸಿದ ಮಹಾನ್‌ ವ್ಯಕ್ತಿಗಳ ಸ್ಮಾರಕಗಳು ಹಾಗೂ ಬಂಧಿಸಿದ ಸ್ಥಳಗಳ ಇತಿಹಾಸದ ಬಗ್ಗೆ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ತಿಳಿಸುವ ಕಾರ್ಯವನ್ನು ಸರ್ಕಾರ ಮಾಡಬೇಕಾಗಿದೆ. ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಪಠ್ಯಪುಸ್ತಕಗಳಲ್ಲಿ ಹೋರಾಟಗಾರರ ವಿಷಯಗಳನ್ನು ಸೇರಿಸಬೇಕು’ ಎಂದು ಹೇಳಿದರು.

ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. 75ನೇ ಸ್ವಾತಂತ್ರೋತ್ಸವ ಅಂಗವಾಗಿ ವಿಶೇಷ ಶಿಲಾ ಫಲಕವನ್ನು ಅನಾವರಣ ಮಾಡಲಾಯಿತು. ಇತಿಹಾಸ ಸಂಶೋಧಕ ಪ್ರೊ. ರಾಜಶೇಖರಪ್ಪ ಬರೆದಿರುವ ‘ಸ್ವಾತಂತ್ರ ಹೋರಾಟದಲ್ಲಿ ಕರ್ನಾಟಕದ ಚಿತ್ರದುರ್ಗ’ ಎಂಬ ಕಿರು ಪುಸ್ತಕ ಬಿಡುಗಡೆ ಮಾಡಿ ಸನ್ಮಾನಿಸ ಲಾಯಿತು. ಸ್ವಾತಂತ್ರ್ಯ ಹೋರಾಟದ ಕುರಿತು ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು.

ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನೀಕೇರಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಜಿ.ಟಿ. ಸುರೇಶ್, ನಗರಸಭೆ ಸದಸ್ಯರಾದ ತಾರಕೇಶ್ವರಿ, ಅನುರಾಧ, ಮಂಜುನಾಥ್‌, ಜಯಣ್ಣ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ರಂಗಸ್ವಾಮಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT