ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಂಥಾಲಯಕ್ಕೆ ಲಕ್ಷ ಸದಸ್ಯರನ್ನು ನೋಂದಾಯಿಸಿ

ಗ್ರಂಥಾಲಯಗಳ ಭೇಟಿ ವೇಳೆ ಇಲಾಖೆಯ ನಿರ್ದೇಶಕ ಡಾ.ಎಸ್. ಸತೀಶ್‌ಕುಮಾರ್ ಹೊಸಮನಿ
Last Updated 18 ಫೆಬ್ರುವರಿ 2021, 14:25 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಡಿಜಿಟಲ್ ಗ್ರಂಥಾಲಯಕ್ಕೆ ಒತ್ತು ನೀಡಲಾಗಿದ್ದು, ಜಿಲ್ಲೆಯಲ್ಲಿ ಒಂದು ಲಕ್ಷ ಸದಸ್ಯತ್ವ ನೋಂದಣಿ ಮಾಡಿಸಬೇಕು’ ಎಂದು ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಎಸ್. ಸತೀಶ್‌ಕುಮಾರ್ ಹೊಸಮನಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯ, ಹೊಳಲ್ಕೆರೆಯ ಶಾಖಾ ಗ್ರಂಥಾಲಯ ಹಾಗೂ ಹೊಸದುರ್ಗ ತಾಲ್ಲೂಕಿನ ಮಲ್ಲಪ್ಪನಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.

‘ರಾಜ್ಯದಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ 20 ಲಕ್ಷ ಸದಸ್ಯತ್ವ ನೋಂದಣಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3.45 ಲಕ್ಷ ಹಾಗೂ ಕಲಬುರಗಿಯಲ್ಲಿ 3.35 ಲಕ್ಷ ಸದಸ್ಯತ್ವ ನೋಂದಣಿ ಪ್ರಕ್ರಿಯೆ ಮುಗಿದಿದೆ. ಒಟ್ಟು 4 ಲಕ್ಷ ಪುಸ್ತಕಗಳು ಡಿಜಿಟಲ್ ಗ್ರಂಥಾಲಯದಲ್ಲಿ ಲಭ್ಯವಿದ್ದು, 10 ಲಕ್ಷ ಪುಸ್ತಕ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಓದುಗರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಇಲ್ಲಿನ ಧವಳಗಿರಿ ಬಡಾವಣೆಯಲ್ಲಿ ನಿರ್ಮಾಣವಾಗಿರುವ ಕಟ್ಟಡವೂ ಶೀಘ್ರ ಲೋಕಾರ್ಪಣೆಯಾಗಬೇಕು. ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ, ತ್ವರಿತವಾಗಿ ಆರಂಭಿಸಿ’ ಎಂದು ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್. ತಿಪ್ಪೇಸ್ವಾಮಿ ಅವರಿಗೆ ಸೂಚನೆ ನೀಡಿದರು.

ಗ್ರಂಥಾಲಯ ಸಂಘದ ನಿರ್ದೇಶಕರಾದ ಮೋಹನ್ ದಾಸ್, ಎಂ.ಎಂ. ಬಾರಕೇರ್, ಎಫ್.ಆರ್. ಹೆಬ್ಬಳ್ಳಿ, ಕೆ. ಗೋಪಾಲ್, ಡಿ. ತಿಮ್ಮರಾಯ್, ಮಕ್ಸೂದ್ ಅಲಿ, ಎಂ.ಬಿ. ತಿಪ್ಪಮ್ಮ, ಎಂ.ಎನ್. ಸವಿತಾ, ಎಸ್.ಬಿ. ಪಾಟೀಲ್, ಟಿ. ರಾಘವೇಂದ್ರಸ್ವಾಮಿ, ಎನ್. ಸುನಿಲ್‌ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT