ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಗೆಲುವಿಗೆ ಹಗಲಿರುಳು ಶ್ರಮಿಸಿ: ಮಾಜಿ ಸಚಿವ ಎಸ್.ಆಂಜನೇಯ ಮನವಿ

ಬೂತ್ ಏಜೆಂಟರಿಗೆ ಮಾಜಿ ಸಚಿವ ಎಸ್.ಆಂಜನೇಯ ಮನವಿ
Published 26 ಮಾರ್ಚ್ 2024, 16:26 IST
Last Updated 26 ಮಾರ್ಚ್ 2024, 16:26 IST
ಅಕ್ಷರ ಗಾತ್ರ

ಹೊಳಲ್ಕೆರೆ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರ ಗೆಲುವಿಗೆ ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕು ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

ಪಟ್ಟಣದ ಪ್ರಸನ್ನ ಗಣಪತಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಹೊಳಲ್ಕೆರೆ ಹಾಗೂ ಭರಮಸಾಗರ ಮಂಡಲ ಕಾಂಗ್ರೆಸ್ ಬೂತ್ ಏಜೆಂಟರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಅಭ್ಯರ್ಥಿ ಗೆಲುವಿಗೆ ಸೇನಾನಿಗಳಂತೆ ಕೆಲಸ ಮಾಡಬೇಕು. ರಾಜ್ಯದ ಕಾಂಗ್ರೆಸ್ ಸರ್ಕಾರ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಎಲ್ಲಾ ವರ್ಗದವರಿಗೆ ಅನುಕೂಲ ಆಗುವಂತಹ 5 ಗ್ಯಾರಂಟಿಗಳನ್ನು ನೀಡಿದೆ. ಕಾಂಗ್ರೆಸ್ ಸದಾ ದಲಿತರು, ಬಡವರು, ಶೋಷಿತರ ಪರವಾಗಿರುವ ಪಕ್ಷವಾಗಿದ್ದು, ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕು. ಕೋಮುವಾದಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಗೆಲ್ಲಿಸಿ’ ಎಂದು ಮನವಿ ಮಾಡಿದರು.

‘ಬಿಜೆಪಿ ಜನರಿಗೆ ಸುಳ್ಳು ಹೇಳುವ ಮೂಲಕ ಅಧಿಕಾರ ಪಡೆಯುತ್ತಿದೆ. ಅಭಿವೃದ್ಧಿ ಬಿಟ್ಟು ಧರ್ಮದ ಹೆಸರಲ್ಲಿ ರಾಜಕೀಯ ಮಾಡುತ್ತಿದೆ. ಚಿತ್ರದುರ್ಗ ಕ್ಷೇತ್ರ ಹಿಂದಿನಿಂದಲೂ ಕಾಂಗ್ರೆಸ್ ಭದ್ರ ಕೋಟೆಯಾಗಿದ್ದು, 8 ವಿಧಾನಸಭಾ ಕ್ಷೇತ್ರಗಳಲ್ಲಿ 7 ಕಡೆ ಕಾಂಗ್ರೆಸ್ ಶಾಸಕರಿದ್ದಾರೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿಯನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕು’ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ.ಹನುಮಂತಪ್ಪ ಅಧ್ಯಕ್ಷತೆ ವಹಿಸಿದ್ದರು. ದೀಪಾ ಬೂತ್ ಏಜೆಂಟರಿಗೆ ತರಬೇತಿ ನೀಡಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತಾಜ್ ಪೀರ್, ಕೆಪಿಸಿಸಿ ಸದಸ್ಯ ಅಮೃತೇಶ್, ಭರಮಸಾಗರ ಮಂಡಲ ಅಧ್ಯಕ್ಷ ಪ್ರಕಾಶ್, ರುದ್ರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಿ.ಕೆ.ಶಿವಮೂರ್ತಿ, ಗಂಗಾಧರ್, ಪಿ.ಆರ್.ಶಿವಕುಮಾರ್, ಲೋಹಿತ್ ಕುಮಾರ್, ಕಾಟಿಹಳ್ಳಿ ಶಿವಕುಮಾರ್, ಸಯ್ಯದ್ ಸಜಿಲ್, ಮಧು ಪಾಲೇಗೌಡ, ಅಂಬಿಕಾ ಮಲ್ಲೇಶಪ್ಪ, ಪಾಡಿಗಟ್ಟೆ ಸುರೇಶ್, ಎ.ಚಿತ್ತಪ್ಪ, ಪುರಸಭೆ ಸದಸ್ಯ ಕೆ.ಸಿ.ರಮೇಶ್, ಮನ್ಸೂರ್, ಸಯೀದ್, ಅಲಿಮುಲ್ಲಾ ಷರೀಫ್, ಕೃಷ್ಣಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT