ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯರೇಹಳ್ಳಿ: ಮತದಾನ ಬಹಿಷ್ಕಾರ

Published 26 ಏಪ್ರಿಲ್ 2024, 19:59 IST
Last Updated 26 ಏಪ್ರಿಲ್ 2024, 19:59 IST
ಅಕ್ಷರ ಗಾತ್ರ

ಚಿತ್ರದುರ್ಗ: ಲೋಕಸಭಾ ಚುನಾವಣೆಯ ಮತದಾನ ಬಹಿಷ್ಕರಿಸಿದ್ದ ತಾಲ್ಲೂಕಿನ ಸಿದ್ದಾಪುರ ಗ್ರಾಮಸ್ಥರು ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸೂಚನೆಗೆ ಸ್ಪಂದಿಸಿ ಹಕ್ಕು ಚಲಾಯಿಸಿದರು. ಯರೇಹಳ್ಳಿ ಗ್ರಾಮಸ್ಥರು ಅಧಿಕಾರಿಗಳ ಮನವಿಗೆ ಸ್ಪಂದಿಸದೇ ಮತದಾನ ಪ್ರಕ್ರಿಯೆಯಿಂದ ದೂರ ಉಳಿದರು.

ಚಿತ್ರದುರ್ಗ ತಾಲ್ಲೂಕಿನ ಯರೇಹಳ್ಳಿ ಗ್ರಾಮದಲ್ಲಿನ ಮತಗಟ್ಟೆಯಲ್ಲಿ 577 ಮತಗಳಿವೆ. ಈ ಪೈಕಿ 24 ಜನರು ಮಾತ್ರ ಮತಗಟ್ಟೆಗೆ ಧಾವಿಸಿ ಹಕ್ಕು ಚಲಾಯಿಸಿದ್ದಾರೆ. ಗ್ರಾಮಸ್ಥರ ಮನವೊಲಿಸಿ ಮತಗಟ್ಟೆಗೆ ಕರೆತರುವ ಅಧಿಕಾರಿಗಳ ಪ್ರಯತ್ನ ಕೊನೆಗೂ ಕೈಗೂಡಲಿಲ್ಲ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌.ಜೆ.ಸೋಮಶೇಖರ್‌ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್‌ ನೇತೃತ್ವದ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಜನರ ಮನವೊಲಿಸುವ ಪ್ರಯತ್ನ ಮಾಡಿತು. ಇದಕ್ಕೆ ಸ್ಪಂದಿಸಿದ ಕೆಲವರು ಮತದಾನ ಮಾಡಿದರು. ‘ಮೂಲಸೌಲಭ್ಯಕ್ಕೆ ಒತ್ತಾಯಿಸಿ ಮತದಾನ ಬಹಿಷ್ಕರಿ ಸಿದ್ದ ಯರೇಹಳ್ಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿತ್ತು. 24 ಜನರು ಮಾತ್ರ ಮತ ಚಲಾವಣೆ ಮಾಡಿದ್ದಾರೆ’ ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್‌ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT