ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಮೂಲಸೌಕರ್ಯಕ್ಕೆ ಆಗ್ರಹಿಸಿ ಮತದಾನ ಬಹಿಷ್ಕಾರ

Published 26 ಏಪ್ರಿಲ್ 2024, 5:42 IST
Last Updated 26 ಏಪ್ರಿಲ್ 2024, 5:42 IST
ಅಕ್ಷರ ಗಾತ್ರ

ಚಿತ್ರದುರ್ಗ: ವಿದ್ಯುತ್‌ ಸಂ‍ಪರ್ಕ, ಮೊಬೈಲ್‌ ಫೋನ್‌ ಟವರ್‌, ಸಾರಿಗೆ ವ್ಯವಸ್ಥೆ ಸೇರಿ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ತಾಲ್ಲೂಕಿನ ಯರೇಹಳ್ಳಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ.

ಮತಗಟ್ಟೆ ಸಮೀಪ ಗುರುವಾರ ಪ್ರತಿಭಟನೆ ನಡೆಸಿದ್ದ ಗ್ರಾಮಸ್ಥರನ್ನು ಅಧಿಕಾರಿಗಳು ಮನವೊಲಿಸಿದ್ದರು. ಆದರೆ, ಶುಕ್ರವಾರ ಬೆಳಿಗ್ಗೆಯಿಂದ ಈವರೆಗೆ ನಾಲ್ವರು ಮಾತ್ರ ಮತದಾನದ ಹಕ್ಕು ಚಲಾಯಿಸಿದ್ದಾರ.

ಇಂಗಳದಾಳ್‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರೇಹಳ್ಳಿ, ಜಿಲ್ಲಾ ಕೇಂದ್ರದಿಂದ 35 ಕಿ.ಮೀ ದೂರದಲ್ಲಿದೆ. 150ಕ್ಕೂ ಹೆಚ್ಚು ಮನೆಗಳಿದ್ದು, ಒಂದು ಮತಗಟ್ಟೆ ತೆರೆಯಲಾಗಿದೆ. ಬೆಳಿಗ್ಗೆ ಮನೆ ಎದುರು ಕುಳಿತ ಮತದಾರರ ಬಳಿಗೆ ತೆರಳಿದ ಅಧಿಕಾರಿಗಳು ಜನರನ್ನು ಮತಗಟ್ಟೆಗೆ ಕರೆತರುವ ಪ್ರಯತ್ನ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT