ಗುರುವಾರ , ಡಿಸೆಂಬರ್ 5, 2019
22 °C

‘ಅಮೃತಕ್ಕೆ ಹಾರುವ ಗರುಡ’ 8ಕ್ಕೆ ಲೋಕಾರ್ಪಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಸಾಹಿತಿ ಡಾ.ಲೋಕೇಶ್‌ ಅಗಸನಕಟ್ಟೆ ಅವರ ‘ಅಮೃತಕ್ಕೆ ಹಾರುವ ಗರುಡ’ ಕೃತಿಯು ಡಿ.8ರಂದು ಸಂಜೆ 5.30ಕ್ಕೆ ಲೋಕಾರ್ಪಣೆಗೊಳ್ಳಲಿದೆ.

ಹೊಸದುರ್ಗ ತಾಲ್ಲೂಕಿನ ಬೆಲಗೂರು ಕ್ಷೇತ್ರದ ವೀರಪ್ರತಾಪ ಆಂಜನೇಯಸ್ವಾಮಿ ದೇಗುಲದ ಆವರಣದಲ್ಲಿ ವೀರಪ್ರತಾಪ ಮೀಡಿಯಾ ಟ್ರಸ್ಟ್‌ ಕಾರ್ಯಕ್ರಮ ಆಯೋಜಿಸಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಕೃತಿ ಲೋಕಾರ್ಪಣೆ ಮಾಡಲಿದ್ದಾರೆ.

ಬೆಲಗೂರು ಶ್ರೀಕ್ಷೇತ್ರದ ಬಿಂದುಮಾಧವ ಸದ್ಗುರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ. ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಮಲ್ಲೇಪುರಂ ಜಿ.ವೆಂಕಟೇಶ್‌ ಕೃತಿ ಕುರಿತು ಮಾತನಾಡಲಿದ್ದಾರೆ. ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಂ.ಎನ್‌.ವೆಂಕಟಾಚಲಯ್ಯ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು