ಶನಿವಾರ, ನವೆಂಬರ್ 28, 2020
18 °C

ಹಿರಿಯೂರು: ಅಪಘಾತದಲ್ಲಿ ಹೊತ್ತಿ ಉರಿದ ಲಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರಿಯೂರು (ಚಿತ್ರದುರ್ಗ): ತಾಲ್ಲೂಕಿನ ಜವನಗೊಂಡನಹಳ್ಳಿ -ಗೋರಲಡುಕು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಂಟೇನರ್‌ಗೆ ಡಿಕ್ಕಿ ಹೊಡೆದ ಲಾರಿ ಹೊತ್ತಿ ಉರಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಬೆಂಗಳೂರು ಕಡೆಯಿಂದ ಹುಬ್ಬಳ್ಳಿಗೆ ಏಷಿಯನ್ ಪೇಂಟ್ ಲಾರಿ ಸಾಗುತ್ತಿತ್ತು. ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ, ಕಂಟೇನರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿಯ ಮುಂಭಾಗಕ್ಕೆ  ಹಾನಿಯಾಗಿದ್ದು, ಏಷಿಯನ್ ಪೇಂಟ್ ಬಾಕ್ಸ್ ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿವೆ.

ಲಾರಿ ಹೊತ್ತಿ ಉರಿಯುತ್ತಿದ್ದಂತೆ ಚಾಲಕ ಕಣ್ಮರೆಯಾಗಿದ್ದಾನೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ಲಾರಿ ಹೊತ್ತಿ ಉರಿಯುತ್ತಿರುವ ದೃಶ್ಯ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು