ಸೋಮವಾರ, ಜುಲೈ 26, 2021
21 °C

ಕೇಂದ್ರ ಅನಗತ್ಯ ಮೂಗು ತೂರಿಸುವುದು ಸರಿಯಲ್ಲ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಕೇಂದ್ರ ಸರ್ಕಾರ ಅನಗತ್ಯವಾಗಿ ಮೂಗು ತೂರಿಸುವುದು ಸರಿಯಲ್ಲ. ಯಡಿಯೂರಪ್ಪ ಅವರು ಅವಧಿ ಪೂರ್ಣಗೊಳಿಸಲು ಬಿಡಬೇಕು ಎಂದು ಸಾಣೇಹಳ್ಳಿಯ ತರಳಬಾಳು ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಒತ್ತಾಯ ಮಾಡಿದರು.

ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದ ಅವರು, ಯಾವುದೇ ಸರ್ಕಾರಕ್ಕೆ ಪೂರ್ಣ ಸ್ವಾತಂತ್ರ್ಯವಿದ್ದಾಗ ಉತ್ತಮ ಆಡಳಿತ ನೀಡಲು ಸಾಧ್ಯ. ಕೇಂದ್ರ ಸರ್ಕಾರ ಹತೋಟಿ ಸಾಧಿಸುವ ಸಂಚು ಮಾಡಿದಂತೆ ಕಾಣುತ್ತಿದೆ. ಯಡಿಯೂರಪ್ಪ ಅವರ ಕೈ ಕಟ್ಟಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದ್ದಾರೆ.

ಉತ್ತಮ ಆಡಳಿತಕ್ಕೆ ಎಲ್ಲರ ಸಹಕಾರ ಮುಖ್ಯ. ಯಾವುದೇ ಪಕ್ಷದ ವ್ಯಕ್ತಿ ಕನಿಷ್ಠ‌ ಐದು ವರ್ಷ ಮುಂದುವರಿದರೆ ಒಳ್ಳೆಯ ಆಡಳಿತ ನಡೆಸಲು ಸಾಧ್ಯ. ಕೇಂದ್ರ, ರಾಜ್ಯದ ಪ್ರತಿನಿಧಿಗಳು ಸಿಎಂಗೆ ಸಂಪೂರ್ಣ ಸ್ವತಂತ್ರ್ಯ ನೀಡಬೇಕು. ಒಳ್ಳೆಯ ಆಡಳಿತ ನಡೆಸಲು ಅವಕಾಶ ಕಲ್ಪಿಸಬೇಕು. ಆಡಳಿತದಲ್ಲಿ ದೋಷ ಕಂಡರೆ ಆಗ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ವರ್ಷ, ಎರಡು ವರ್ಷಕ್ಕೆ ಮುಖ್ಯಮಂತ್ರಿ ಬದಲಿಸಬಾರದು. ಸಿಎಂ ಬದಲಾವಣೆಯಿಂದ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಲು ಸಾಧ್ಯ ಆಗುವುದಿಲ್ಲ. ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಲಿ. ಯಡಿಯೂರಪ್ಪ ಅವರಿಗೆ ಪೂರ್ಣಾವಧಿ ಕೆಲಸ ಮಾಡಲು ಬಿಡಬೇಕು ಎಂದು ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ಇದನ್ನೂ ಓದಿ... ಮೈತ್ರಿ ಸರ್ಕಾರ ಕೆಡವಿತೇ ಪೆಗಾಸಸ್?

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು