ಶುಕ್ರವಾರ, ಅಕ್ಟೋಬರ್ 30, 2020
24 °C

ಮಾದಾರ ಚನ್ನಯ್ಯ ಸ್ವಾಮೀಜಿ ಕೋವಿಡ್‌ನಿಂದ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಕೊರೊನಾ ಸೋಂಕು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ಗುಣಮುಖರಾಗಿದ್ದಾರೆ.

ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಿಂದ ಸ್ವಾಮೀಜಿ ಬುಧವಾರ ಬಿಡುಗಡೆಗೊಂಡರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಹೂಗುಚ್ಛ ನೀಡಿ ಸ್ವಾಮೀಜಿ ಅವರನ್ನು ಬೀಳ್ಕೊಟ್ಟರು. ಅಲ್ಲಿಂದ ನೇರವಾಗಿ ಗುರುಪೀಠಕ್ಕೆ ಆಗಮಿಸಿದ ಸ್ವಾಮೀಜಿ ಅವರನ್ನು ಭಕ್ತರು ಸಂತಸದಿಂದ ಸ್ವಾಗತಿಸಿದರು.

ಒಳಮೀಸಲಾತಿ ಕುರಿತು ಚರ್ಚಿಸಲು ರಾಜ್ಯದ ಹಲವೆಡೆ ಪ್ರವಾಸ ಮಾಡಿದ್ದ ಸ್ವಾಮೀಜಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಅವರನ್ನು ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು