ಚಿತ್ರದುರ್ಗ: ಒಳ ಮೀಸಲಾತಿ ಜಾರಿಗೊಳಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ತೋರಿದೆ. ಮೂರು ದಶಕಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಿರುವ ಮಾದಿಗ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಸ್ವಾಭಿಮಾನಿ ಮಾದಿಗ ಮಹಾಸಭಾ ಸದಸ್ಯರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಸೇರಿದ ಸಮುದಾಯದ ಮುಖಂಡರು, ಸದಸ್ಯರು ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು. ಮೆರವಣಿಗೆಯುದ್ದಕ್ಕೂ ಅಂಬೇಡ್ಕರ್ ಭಾವಚಿತ್ರ ಹಿಡಿದು, ನೀಲಿ ಶಾಲುಗಳನ್ನು ಬೀಸುತ್ತಾ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪರಿಶಿಷ್ಟ ಜಾತಿಗಳ ಸಮುದಾಯದಲ್ಲಿ ಅತೀ ಹಿಂದುಳಿದಿರುವ ಮಾದಿಗ ಸಮುದಾಯ ಅವಕಾಶಗಳಿಂದ ವಂಚಿತವಾಗಿದೆ. ಸಾಮಾಜಿಕ ನ್ಯಾಯವನ್ನು ಒದಗಿಸುವ ಸಲುವಾಗಿ ಜಾರಿಯಾಗಬೇಕಿರುವ ಒಳ ಮೀಸಲಾತಿಯ ಬೇಡಿಕೆ ಈಡೇರಿಲ್ಲ. ಆ.1, 2024ರಲ್ಲಿ ಸುಪ್ರೀಂ ಕೋರ್ಟ್ ಸ್ಪಷ್ಟವಾದ ತೀರ್ಪು ನೀಡಿದ್ದು ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿದೆ. ತೀರ್ಪು ಬಂದು ವರ್ಷವಾದರೂ ರಾಜ್ಯ ಸರ್ಕಾರ ಇಲ್ಲಿವರೆಗೂ ಒಳಮೀಸಲಾತಿ ಜಾರಿಗೊಳಿಸಿಲ್ಲ ಎಂದು ಪ್ರತಿಭಟನಕಾರರು ದೂರಿದರು.

‘ಮಾದಿಗರ ಮತ ಪಡೆದಿರುವ ಕಾಂಗ್ರೆಸ್ ಪಕ್ಷ ನಮ್ಮನ್ನು ನಡು ಬೀದಿಯಲ್ಲಿ ನಿಲ್ಲಿಸಿದೆ. ಈ ವಿಳಂಬ ನೀತಿಯಿಂದಾಗಿ ನಮ್ಮ ಸಮುದಾಯದ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು, ಕಾರ್ಮಿಕರು ಹಾಗೂ ಮಹಿಳೆಯರು ನ್ಯಾಯಯುತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ. 2008ರಲ್ಲಿ ಸದಾಶಿವ ಆಯೋಗ ರಚಿಸಲಾಯಿತು. ಈಗ ದತ್ತಾಂಶ ಸಂಗ್ರಹಕ್ಕಾಗಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ರಚಿಸಲಾಗಿದೆ. ಅದು ನಮ್ಮ ಬೇಡಿಕೆ ಆಗಿರಲಿಲ್ಲ. ಅನಗತ್ಯ ವಿಳಂಬ ಮಾಡುತ್ತಿರುವುದು ಅನುಮಾನ ಮೂಡಿಸುತ್ತದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಆ.11ರಿಂದ ಆರಂಭಗೊಳ್ಳುವ ಚಳಿಗಾಲದ ಅಧಿವೇಶನದಲ್ಲಿ ಒಳ ಮೀಸಲಾತಿ ಕುರಿತು ವರದಿ ಮಂಡನೆಯಾಗಬೇಕು. ಮುಂದೂಡುವ ಪ್ರಯತ್ನ ಮಾಡಿದರೆ ಉಗ್ರ ಹೋರಾಟ ನಡೆಸಲಾಗುವುದು. ಸುಪ್ರೀಂಕೋರ್ಟ್ ತೀರ್ಪು ಬಂದ ಕೂಡಲೇ ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ ಸರ್ಕಾರಗಳು ಒಳ ಮೀಸಲಾತಿ ಜಾರಿಗೊಳಿಸಿವೆ. ಆದರೆ ಇಲ್ಲಿಯವರೆಗೂ ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿದೆ’ ಎಂದು ಆರೋಪಿಸಿದರು.

‘ಅಹಿಂದ ನಾಯಕ, ಹಿಂದುಳಿದ ವರ್ಗಗಳ ನಾಯಕ ಎಂದೆಲ್ಲಾ ಹೆಸರು ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮುದಾಯಕ್ಕೆ ನ್ಯಾಯ ನೀಡುವ ಕೆಲಸ ಮಾಡುತ್ತಿಲ್ಲ. ವಿಧಾನಸಭಾ ಚುನಾವಣೆಗೆ ಮೊದಲು ಅಧಿಕಾರಕ್ಕೆ ಬಂದ ದಿನವೇ ಒಳಮೀಸಲಾತಿ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ ಇಲ್ಲಿವರೆಗೂ ಸತಾಯಿಸುತ್ತಿರುವುದನ್ನು ನೋಡಿದರೆ ಅನುಮಾನ ಮೂಡುತ್ತದೆ. ರಾಜ್ಯ ಸರ್ಕಾರದ ಈ ಕ್ರಮ ಪರಿಶಿಷ್ಟ ಜಾತಿಗಳಲ್ಲಿ ಅದರಲ್ಲೂ ಮುಖ್ಯವಾಗಿ ಮಾದಿಗ ಮತ್ತು 29 ಉಪಜಾತಿಗಳಲ್ಲಿ ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ’ ಎಂದರು.

‘ಕಾಂಗ್ರೆಸ್ ಪಕ್ಷ ವ್ಯವಸ್ಥಿತವಾಗಿ ಮಾದಿಗರನ್ನು ವಂಚಿಸುತ್ತ ಬರುತ್ತಿದೆ. ಒಳ ಮೀಸಲಾತಿ ಜಾರಿಯಾಗುವತನಕ ನಮ್ಮ ಹೋರಾಟ ನಿಲ್ಲುವುದಿಲ್ಲ. ನಾಗಮೋಹನ್ ದಾಸ್ ವರದಿಯ ಗೊಂದಲಗಳು, ಸರ್ಕಾರದ ನಿರ್ಲಕ್ಷ್ಯ ಧೋರಣೆಯ ಬಗ್ಗೆ ಎಚ್ಚರಿಕೆಯ ಗಂಟೆ ಬಾರಿಸುತ್ತಿದ್ದೇವೆ. ಸರ್ಕಾರದ ವಿಳಂಬ ಧೋರಣೆ ಇದೇ ರೀತಿ ಮುಂದುವರಿದರೆ ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಿದೆ. ನಮ್ಮ ಹಕ್ಕುಗಳಿಗಾಗಿ ಕರ್ನಾಟಕದಾದ್ಯಂತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು, ಕಾರ್ಮಿಕರು, ವಕೀಲರು. ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರೂ ಒಗ್ಗೂಡಿ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಸಿದರು.

ಹೋರಾಟಗಾರರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಹಾಕಲು ಯತ್ನಿಸಿದರು. ಈ ವೇಳೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದರು. ಸಮುದಾಯದ ಮುಖಂಡರಾದ ಜಿ.ಎಚ್.ಮೋಹನ್ ಕುಮಾರ್, ಚಳ್ಳಕೆರೆ ಶ್ರೀನಿವಾಸ್, ಕರಿಬಸಪ್ಪ, ಮೊಗಲಹಳ್ಳಿ ಸಿದ್ಧಾರ್ಥ, ಚನ್ನಿಗನಹಳ್ಳಿ ಮಲ್ಲೇಶ್, ಮುದ್ದಾಪುರ ಪರಶುರಾಂ, ಮಸ್ಕಲ್ ಹನುಮಂತಪ್ಪ, ಗೂಳಿಹಟ್ಟಿ ಕೃಷ್ಣಮೂರ್ತಿ, ಮಹಾಂತೇಶ್, ಮಂಜಣ್ಣ, ಮಂಜುನಾಥ್, ಮಂಜುಳಮ್ಮ, ಬಸಮ್ಮ ಇದ್ದರು.

ಒಳ ಮೀಸಲಾತಿ ಜಾರಿ ಮಾಡಲು ಮೀನಾ–ಮೇಷ ಏಕೆ? ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತು ಉಳಿಸಿಕೊಳ್ಳಲಿ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ

ಮಹಾಸಭಾದಿಂದ ತಮಟೆ ಚಳವಳಿ ಒಳಮೀಸಲಾತಿ ಜಾರಿಗೊಳಸಲು ರಾಜ್ಯ ಸರ್ಕಾರ ಅನಾವಶ್ಯಕ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಮಾದಿಗ ಮಹಾಸಭಾ ಸದಸ್ಯರು ನಗರದ ಒನಕೆ ಓಬವ್ವ ವೃತ್ತದಲ್ಲಿ ತಮಟೆ ಚಳವಳಿ ನಡೆಸಿದರು. ಒಳ ಮೀಸಲಾತಿ ಜಾರಿಗೊಳಿಸಲು ಒಂದು ವರ್ಷ ಬೇಕಾಗಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೂ ಮೊದಲು ಕೊಟ್ಟ ಮಾತು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಆ ಮೂಲಕ ಮಾದಿಗ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಆದಷ್ಟು ಬೇಗ ಒಳಮೀಸಲಾತಿ ಜಾರಿಗೊಳಿಸದಿದ್ದರೆ ರಾಜ್ಯದಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಹನುಮಂತಪ್ಪ ದುರ್ಗ ಕೆ.ಟಿ.ಶಿವಕುಮಾರ್ ಕುಂಚಿಗನಾಳ್ ಮಹಾಲಿಂಗಪ್ಪ ಕೆ.ರಾಜಣ್ಣ ಶ್ರೀನಿವಾಸ್ ಏಕಾಂತಪ್ಪ ಹುಲ್ಲೂರು ಕುಮಾರಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.